ಈಗ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣ ಆಗುತ್ತದೆ: ಸಿ ಟಿ ರವಿ

ಬಿಜೆಪಿ ಹೈಕಮಾಂಡ್ ಬಿ ವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಮಾಧ್ಯಮ ಪ್ರತಿನಿಧಿಗಳು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಸಿ ಟಿ ರವಿಯವರ ಪ್ರತಿಕ್ರಿಯೆ ಕೇಳಿದಾಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ.
ಸಿ ಟಿ ರವಿ
ಸಿ ಟಿ ರವಿ
Updated on

ಬೆಂಗಳೂರು: ಬಿಜೆಪಿ ಹೈಕಮಾಂಡ್ ಬಿ ವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಮಾಧ್ಯಮ ಪ್ರತಿನಿಧಿಗಳು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಸಿ ಟಿ ರವಿಯವರ ಪ್ರತಿಕ್ರಿಯೆ ಕೇಳಿದಾಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ.

ಪಕ್ಷ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪಕ್ಷದ ವೈಚಾರಿಕ ಬದ್ಧತೆ ಜೊತೆಗೆ ಪಕ್ಷವನ್ನು ಬೆಳೆಸುವ ಬೆಳೆಸಿ, ವಿಸ್ತರಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಕೂಡ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದರು.

ಪಕ್ಷದಲ್ಲಿ ಅನೇಕ ಹಿರಿಯರಿದ್ದಾರೆ, ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗಬಹುದಿತ್ತು ಎಂದು ಅನಿಸುವುದಿಲ್ಲವೇ, ನಿಮ್ಮ ಹೆಸರು ಕೂಡ ಕೊನೆಗಳಿಗೆಯವರೆಗೂ ಕೇಳಿಬರುತ್ತಿತ್ತು ಎಂದು ಕೇಳಿದಾಗ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು, ಎಲ್ಲವೂ ಬದಲಾಗುತ್ತಿರುತ್ತದೆ, ಬದಲಾಗದೇ ಇರುವುದು ಕಾರ್ಯಕರ್ತ. ನಾನು ಈಗ ಸಾಮಾನ್ಯ ಕಾರ್ಯಕರ್ತ ಎಂದರು.

ನಾನು ಈಗ ಏನೂ ಹೇಳಿಕೆ ನೀಡುವುದಿಲ್ಲ. ಯಾಕೆಂದರೆ ಈಗಾಗಲೇ ನಾವು ಬಹಳ ಮಾತನಾಡಿದ್ದೇವೆ. ಕಳೆದ 35 ವರ್ಷದಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಬೂತ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೆಗೆ ಜವಾಬ್ದಾರಿ ನಿರ್ವಹಿಸಿದ್ದೇನೆ. ಬಹಳ ವಿಷಯ ಮಾತನಾಡಿದ್ದೇನೆ. ಈಗ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com