ಸಚಿವ ಮುರುಗೇಶ್ ನಿರಾಣಿ
ರಾಜಕೀಯ
ಆಪರೇಷನ್ ಕಮಲ ಮಾಡುತ್ತಿಲ್ಲ, ಕಾಂಗ್ರೆಸ್ ಸರ್ಕಾರ ತನ್ನಷ್ಟಕ್ಕೆ ತಾನೇ ಪತನವಾಗಲಿದೆ: ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇಲ್ಲ ಬದಲಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಜಿ ಪರಮೇಶ್ವರ ಅವರ ಬಣಗಳ ಸರ್ಕಾರವಿದೆ ಎಂದು ಬಿಜೆಪಿ ಮುಖಂಡ ಮುರುಗೇಶ್ ನಿರಾಣಿ ಭಾನುವಾರ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇಲ್ಲ ಬದಲಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಜಿ ಪರಮೇಶ್ವರ ಅವರ ಬಣಗಳ ಸರ್ಕಾರವಿದೆ ಎಂದು ಬಿಜೆಪಿ ಮುಖಂಡ ಮುರುಗೇಶ್ ನಿರಾಣಿ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಚಿತ ಖಾತರಿಗಳ ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. 'ಈ ಸರ್ಕಾರ ಐದು ವರ್ಷಗಳನ್ನು ಪೂರ್ಣಗೊಳಿಸಲಿ ಎಂದು ನಾವು ನಿರೀಕ್ಷಿಸುತ್ತೇವೆ. ನಾವು ಯಾವುದೇ ಆಪರೇಷನ್ ಕಮಲದಲ್ಲಿ ತೊಡಗಿಲ್ಲ. ಆದರೆ, ಸರ್ಕಾರ ತನ್ನ ಪಾಡಿಗೆ ತಾನು ಬೀಳುವ ಸಾಧ್ಯತೆ ಇದೆ' ಎಂದು ನಿರಾಣಿ ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ನೂತನವಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಎಲ್ಲ ಸಹಕಾರ ನೀಡಲಾಗುವುದು ಎಂದರು.


