ನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ: ಬಿ.ವೈ.ವಿಜಯೇಂದ್ರ
ಬೆಂಗಳೂರು: ನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.
ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಬಿಜೆಪಿ ಶಾಸಕಾಂಗ ಪಕ್ಚದ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ. ವೀಕ್ಷಕರಾಗಿ ಯಾರು ಬರುತ್ತಾರೆ ಎಂಬುದು ನಾಳೆ ಗೊತ್ತಾಗುತ್ತದೆ ಎಂದರು.
ಸಮಾವೇಶದ ಬಗ್ಗೆ ಹಿರಿಯರ ಜೊತೆ ಚರ್ಚಿಸಿದ ನಂತರ ತೀರ್ಮಾನ ಮಾಡಲಾಗುವುದು. ಇನ್ನು ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ. ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷ ನಾಯಕನನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದರು.
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಕಸರತ್ತು ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಡಾ. ಸಿ.ಎನ್.ಅಶ್ವತ್ಥ ನಾರಾಯಣ್, ಹಾಗೂ ಆರ್ ಅಶೋಕ್ ಅವರು ರೇಸ್ ನಲ್ಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ