ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು
ಬೆಂಗಳೂರು: ಜೆಡಿಎಸ್‌ನ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಅಧ್ಯಕ್ಷ ಎಚ್‌ಡಿ ದೇವೇಗೌಡ ಅವರು ಶುಕ್ರವಾರ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿದ್ದಾರೆ.
ಮಾಜಿ ಕೇಂದ್ರ ಸಚಿವ ಇಬ್ರಾಹಿಂ ಅವರು ಕಾಂಗ್ರೆಸ್ ಎಂಎಲ್‌ಸಿ ಆಗಿದ್ದರು. ನಂತರ ಪಕ್ಷ ತೊರೆದಿದ್ದ ಅವರು ಜೆಡಿಎಸ್ ಗೆ ಸೇರ್ಪಡೆಯಾಗಿದ್ದು ಅವರನ್ನು ಜೆಡಿಎಸ್ ನ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಲಾಗಿತ್ತು. ಆದರೆ, ಜೆಡಿ(ಎಸ್) ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರ್ಪಡೆಗೊಂಡಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಇಬ್ರಾಹಿಂ ಈ ಕ್ರಮವನ್ನು ವಿರೋಧಿಸಿದ್ದು ಅಲ್ಲದೆ ಮೈತ್ರಿ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿದ್ದರು.
ಆದರೆ ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಅಧಿಕೃತಗೊಳಿಸಿದ ನಂತರ, ದೇವೇಗೌಡರು ಇಡೀ ರಾಜ್ಯ ಕಾರ್ಯಕಾರಿಣಿಯನ್ನು ವಿಸರ್ಜಿಸಿದ್ದರು. ಇದರ ಪರಿಣಾಮವಾಗಿ ಇಬ್ರಾಹಿಂ ಅವರು ರಾಜ್ಯ ಪಕ್ಷದ ಘಟಕದ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡರು. ಇದೀಗ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ