ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ: 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು!

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್‌'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ.
ಎಚ್.ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್
ಎಚ್.ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್
Updated on

ಬೆಂಗಳೂರು: ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ! ಕೊನೆಗೆ, ಝಣ ಝಣ ಕಾಂಚಾಣ, ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ ಎಂದು ಲೇವಡಿ ಮಾಡಿದ್ದಾರೆ.

ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ, ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ ಎಂದು ಎಚ್ ಡಿಕೆ ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು!  ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್‌'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ?

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಕುಮಾರಸ್ವಾಮಿ ತಪರಾಕಿ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com