ನೀವು ಕುಮಾರಸ್ವಾಮಿ ಒಟ್ಟಾಗಿ ಕೆಲಸಮಾಡಿ ಅಂತಾ ಸಲಹೆ ನೀಡಿದ್ದಾರೆ: ದೇವೇಗೌಡರ ಭೇಟಿ ಬಳಿಕ ಆರ್ ಅಶೋಕ್

ನೀವು ಕುಮಾರಸ್ವಾಮಿ ಒಟ್ಟಾಗಿ ಕೆಲಸಮಾಡಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಲಹೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್​ ಅವರು ಶನಿವಾರ ಹೇಳಿದ್ದಾರೆ.
ದೇವೇಗೌಡರನ್ನು ಭೇಟಿ ಮಾಡಿದ ಆರ್ ಅಶೋಕ್
ದೇವೇಗೌಡರನ್ನು ಭೇಟಿ ಮಾಡಿದ ಆರ್ ಅಶೋಕ್

ಬೆಂಗಳೂರು: ನೀವು ಕುಮಾರಸ್ವಾಮಿ ಒಟ್ಟಾಗಿ ಕೆಲಸಮಾಡಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಲಹೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್​ ಅವರು ಶನಿವಾರ ಹೇಳಿದ್ದಾರೆ.

ನಿನ್ನೆಯಷ್ಟೇ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ್ ಅವರು ಇಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಕಾವೇರಿ, ಮಹದಾಯಿ ನದಿ ವಿಚಾರವಾಗಿ ಎಚ್​ಡಿ ದೇವೇಗೌಡರು ಸಲಹೆ ನೀಡಿದ್ದಾರೆ. ಸಂಪೂರ್ಣ ಸಹಕಾರ ನೀಡುವುದಾಗಿ ದೇವೇಗೌಡರು ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿದರು ಎಂದರು.

ನೀವು ಕುಮಾರಸ್ವಾಮಿ ಒಟ್ಟಾಗಿ ಕೆಲಸ ಮಾಡಿ. ಯಾವುದೇ ಸಮಯದಲ್ಲಿ ಸಹಾಯ, ಆಶೀರ್ವಾದ ಇರುತ್ತದೆ. 60 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ. ಮೋದಿಯವರಿಗೆ ಗೌರವ ತರುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದರು. ಅವರು ಸಹ ಲೋಕಸಭೆ ಚುನಾವಣೆಗೆ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಒಟ್ಟಿಗೆ ಹೋಗಿ ದುರಾಡಳಿತ ಸರ್ಕಾರವನ್ನು ತೆಗೆದುಹಾಕಿ ಎಂದು ಸಲಹೆ ನೀಡಿರುವುದಾಗಿ ಆರ್ ಅಶೋಕ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com