ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ; ಜೀವಕ್ಕೆ ಹಾನಿಯಾದರೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಬಿಜೆಪಿ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

ಕಲಬುರಗಿ/ ಬೆಂಗಳೂರು: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ರಾಠೋಡ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಈ ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮುಖಂಡ ರಾಠೋಡ್ ಗೆ ಇನ್ನಿಲ್ಲದಂತೆ ಟಾರ್ಗೆಟ್ ಮಾಡಿ, ಕಿರುಕುಳ ನೀಡಿದ್ದಾರೆ. ಅವರ ಜೀವಕ್ಕೆ ಏನಾದರೂ ಹಾನಿಯಾದರೆ, ಅದಕ್ಕೆ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಸರ್ಕಾರ ನೇರ ಹೊಣೆ ಎಂದು ಎಚ್ಚರಿಕೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com