ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಯತ್ನ: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.
ರಮೇಶ್ ಜಾರಕಿಹೊಳಿ ಮನೆಯಲ್ಲಿ ಉಪಹಾರ ಸೇವನೆ ಮಾಡುತ್ತಿರುವ ಬಿವೈ ವಿಜಯೇಂದ್ರ.
ರಮೇಶ್ ಜಾರಕಿಹೊಳಿ ಮನೆಯಲ್ಲಿ ಉಪಹಾರ ಸೇವನೆ ಮಾಡುತ್ತಿರುವ ಬಿವೈ ವಿಜಯೇಂದ್ರ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಸದಾಶಿವನಗರದ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಇಂದು ಬೆಳಿಗ್ಗೆ ವಿಜಯೇಂದ್ರ ಅವರು ಭೇಟಿ ನೀಡಿದ್ದು, ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಅವರು, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಬಳಿಕ ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.

ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅತೃಪ್ತಿಗೊಂಡಿದ್ದರು. ಹೀಗಾಗಿ ಅವರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆನ್ನಲಾಗಿದೆ.

ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ ಅವರು, ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ದರು. ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜೊತೆಗೆ ಕರೆದೊಯ್ಯುವುದು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ. ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡುತ್ತೇನೆಂದು ಹೇಳಿದ್ದಾರೆಂದು ಎಂದು ಸಂತಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com