ಜಾತಿಗಣತಿ ವರದಿ: ಬರೀ ಊಹೆಗಳ ಮೇಲೆ ಮಾತನಾಡುವುದು ಸರಿಯಲ್ಲ; ಬಿಜೆಪಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ-  ಸಿದ್ದರಾಮಯ್ಯ

ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.  

ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ? ಎಂದು ಪ್ರಶ್ನಿಸಿದರು. ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡಬಾರದು. ಸಮಾಜವನ್ನು ಏಕೆ ಒಡೆಯುತ್ತೇವೆ? ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟರೆ?ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ  ಮೇಲೆ ಅವಲಂಬಿತವಾಗಿರಬೇಕು ಎಂದರು. 

 ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೆಗ್ಡೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ,  ಹೆಗ್ಡೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ತಿಳಿಸಿದರು. 

ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ: ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರನವರನ್ನು ಅಧ್ಯಕ್ಷರನ್ನಾಗಿ ಹಾಗೂ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ. ಬಹಳಷ್ಟು ಜನರಿಗೆ ಅಸಮಾಧಾನವಾಗಿದೆ. ಇದು ಏನಾಗುತ್ತದೆ ಎಂದು ಗೊತ್ತಿಲ್ಲ. ಅದು ಜ್ವಾಲೆಯಾಗುತ್ತದೆಯೋ ಅವರ ಬುಡಕ್ಕೆ ಬೆಂಕಿ ಹತ್ತುಕೊಳ್ಳುತ್ತದೆಯೋ ಗೊತ್ತಿಲ್ಲ. ಬೆಂಕಿ ಅಂತೂ ಹೊತ್ತಿಕೊಂಡಿದೆ ಎಂದರು.

ಪಕ್ಷಕ್ಕೆ ಸೇರ್ಪಡೆಯಾಗುವವರು ಕೈ ಸಿದ್ಧಾಂತಕ್ಕೆ ಬದ್ಧರಾಗಿರಬೇಕು: ನಾವು ಯಾರನ್ನೂ ಕಾಂಗ್ರೆಸ್ಸಿಗೆ ಕರೆಯೋಲ್ಲ, ಅವರಾಗಿಯೇ  ಬಂದರೆ ಸೇರಿಸಿಕೊಳ್ಳುತ್ತೇವೆ. ನಾನು ಯಾರನ್ನೂ ಸಂಪರ್ಕಿಸಿಲ್ಲ. ಯಾರು ನಮ್ಮ ನಾಯಕತ್ವವನ್ನು ಒಪ್ಪಿಕೊಂಡು ಅವರಾಗಿಯೇ ಬರುತ್ತಾರೋ ಅವರನ್ನು ಸೇರಿಸಿಕೊಂಡಿದ್ದೇವೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನೂ ಬನ್ನಿ ಎಂದು ಕರೆಯಲು ಹೋಗಿಲ್ಲ. ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕಲ್ಲ. ಬಿಜೆಪಿ ಯಲ್ಲಿ ಬಹಳ ವರ್ಷ ಇದ್ದವರು ಆ ಸಿದ್ಧಾಂತ ವನ್ನು ಒಪ್ಪಿರುತ್ತಾರೆ.ಅದನ್ನು  ಬಿಟ್ಟು ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com