ಸೋಮಣ್ಣ, ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆ ಕುರಿತು ಗೃಹ ಸಚಿವ ಪರಮೇಶ್ವರ್ ಸುಳಿವು

ಬಿಜೆಪಿ ಮುಖಂಡರಾದ ವಿ.ಸೋಮಣ್ಣ, ಅರವಿಂದ ಲಿಂಬಾವಳಿ ಅವರ ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಚರ್ಚೆ ನಡೆಯುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದರು.
ಗೃಹ ಸಚಿವ ಡಾ ಜಿ ಪರಮೇಶ್ವರ್
ಗೃಹ ಸಚಿವ ಡಾ ಜಿ ಪರಮೇಶ್ವರ್

ತುಮಕೂರು: ಬಿಜೆಪಿ ಮುಖಂಡರಾದ ವಿ.ಸೋಮಣ್ಣ, ಅರವಿಂದ ಲಿಂಬಾವಳಿ ಅವರ ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಚರ್ಚೆ ನಡೆಯುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದರು.

ಸೋಮಣ್ಣ ಅವರನ್ನು ಕಾಂಗ್ರೆಸ್‌ಗೆ ಕರೆತಂದು ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗುತ್ತದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಪರಮೇಶ್ವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಸುದ್ದಿಗಾರರೊಂದಿಗೆ ನಿನ್ನೆ ಮಾತನಾಡಿದ ಪರಮೇಶ್ವರ್ ಅವರು, ‘ಸಿದ್ಧಗಂಗಾ ಮಠದಲ್ಲಿ ಸೋಮಣ್ಣ ಹಾಗೂ ಅವರ ಕುಟುಂಬದವರು ನಿರ್ಮಿಸಿರುವ ಗುರುಭವನ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ. ಹಾಗಾಗಿ ಡಿ. 6ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ’ ಎಂದು ಹೇಳಿದರು.

ಇದೇ ವೇಳೆ ಬೆಳಗಾವಿಯಲ್ಲಿ 112 ವಾಹನದಲ್ಲೇ ಪೊಲೀಸರು ಪಾರ್ಟಿ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪರಿಶೀಲಿಸಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com