ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸಿಗೆ ನಿರ್ಧಾರ: ದರೋಡೆಕೋರರ ರಕ್ಷಿಸಲು ಕಾಂಗ್ರೆಸ್ ಅಧಿಕಾರದಲ್ಲಿದೆ; ಹೆಚ್​ಡಿ ಕುಮಾರಸ್ವಾಮಿ ಟೀಕೆ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿರುವುದರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿರುವುದರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರೋಡೆಕೋರರ ರಕ್ಷಣೆ ಮಾಡಲು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.    

ಡಿಕೆ.ಶಿವಕುಮಾರ್ ವಿರುದ್ಧದ ಪ್ರಕರಣ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದೆ. ನ್ಯಾಯಾಲಯ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ನ್ಯಾಯಾಲಯದ ನಿರ್ಧಾರದ ಬಳಿಕ ನಾನು ಪ್ರತಿಕ್ರಿಯೆ ನೀಡುತ್ತೇನೆಂದು ಹೇಳಿದರು.

ಮರ್ಯಾದೆ ಇಲ್ಲದವರಿಗೆ ಕೋರ್ಟ್​​ನಲ್ಲಿ ಇದ್ದರೇನು, ಎಲ್ಲಿದ್ದರೇನು? ಎಲ್ಲವನ್ನೂ ದುಡ್ಡಿನಿಂದ ಕೊಂಡುಕೊಳ್ಳುತ್ತೇವೆ ಎನ್ನುವ ದುರಹಂಕಾರ ಇದೆ ಎಂದು ಇದೇ ವೇಳೆ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್​​ ನೀಡಿದ್ದ ಹಲವು ತೀರ್ಪುಗಳು ನನ್ನ ಕಣ್ಮುಂದೆ ಇದೆ. ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್​​ನಲ್ಲಿ ಚರ್ಚೆ ಆಗಿದೆ. ಪ್ರಕರಣ ನ್ಯಾಯಾಲಯದ ಅಂಗಳದಲ್ಲಿ ಇದ್ದಾಗ ರಾಜ್ಯ ಸರ್ಕಾರದ ನಿರ್ಧಾರ ತೆಗೆದುಕೊಂಡಿರುವುದು ತಪ್ಪು. ಕಾನೂನಿಗಿಂತ ದೊಡ್ಡವರು ಎಂಬುದನ್ನು ಪ್ರದರ್ಶನ ಮಾಡಿಕೊಂಡಿದ್ದಾರೆ. ಲೂಟಿ‌ ಮಾಡುವವರಿಗೆ ನಮ್ಮ ಸರ್ಕಾರ ಎಂಬುದನ್ನು ನಿರೂಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com