ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್: ಕಾನೂನು ಬಾಹಿರ ಎಂದ ಮಾಜಿ ಸಿಎಂ ಯಡಿಯೂರಪ್ಪ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ಸಿಗೆ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಕಾನೂನು ಬಾಹಿರ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ಸಿಗೆ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಕಾನೂನು ಬಾಹಿರ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಡಿಕೆ.ಶಿವಕುಮಾರ್ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆಂದು ಹೇಳಿದ್ದರು. ಅಲ್ಲದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೇ ವೇಳೆ ಸಿಬಿಐ ಜೊತೆಗೂ ಮಾಹಿತಿ ಹಂಚಿಕೊಂಡಿದ್ದರು.

“ರಾಜ್ಯ ಸರ್ಕಾರವು ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದುಕೊಂಡಿತ್ತು. ರಾಜ್ಯ ಸರ್ಕಾರವು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿದೆ, ಕಾಯ್ದೆಯ ಪ್ರಕಾರ ರಾಜ್ಯದ ಅನುಮತಿಯಿಲ್ಲದೆ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ. ವಿಚಾರಣೆ ವೇಳೆ ಪ್ರಕರಣದ ತನಿಖೆಗೆ ಸಿಬಿಐಗೆ ಅನುಮತಿ ನೀಡುವ ಸರ್ಕಾರದ ನಿಲುವನ್ನು ಎಜಿ ಸಮರ್ಥಿಸಿಕೊಂಡಿದ್ದಾರೆ. ಸದ್ಯ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆಗೆ ಬಾಕಿ ಇದೆ ಎಂದು ಹೇಳಿದರು.

ಈ ನಡುವಲ್ಲೇ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಕಾನೂನು ಬಾಹಿರವಾದದ್ದು. "ತನಿಖೆ ಪ್ರಾರಂಭವಾದ ನಂತರ, ಯಾವುದೇ ಪ್ರಾಧಿಕಾರವು ಅದನ್ನು ಹಿಂಪಡೆಯಲು ಸಾಧ್ಯವಿಲ್ಲಯ ಈಗ ಅನುಮತಿ ಹಿಂಪಡೆಯುವುದನ್ನು ವಿರೋಧಿಸಿ ಕಾನೂನು ಹೋರಾಟಕ್ಕೆ ನಾವೂ ಸಿದ್ಧವಿದ್ದೇವೆ. ಅಗತ್ಯ ಕಂಡುಬಂದಲ್ಲಿ ನ್ಯಾಯಾಲಯಕ್ಕೆ ಹೆಚ್ಚಿನ ದಾಖಲೆ ಒದಗಿಸಲು ತಾವು ಸಿದ್ಧ ಎಂದು ತಿಳಿಸಿದರು.

ಎ.ಜಿ ಹುದ್ದೆಯಲ್ಲಿರುವವರು ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಈ ಪ್ರಕರಣದಲ್ಲಿ ಕಾನೂನು ಚೌಕಟ್ಟು ಮೀರಿ ಅಭಿಪ್ರಾಯ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಅಕ್ಷಮ್ಯ ಅಪರಾಧ ಮಾಡಿದ್ದಾರೆ. ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ. ಈಗಲಾದರೂ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಬೇಕು’ ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com