ವಿ ಸೋಮಣ್ಣ ನೇತೃತ್ವದಲ್ಲಿ ಅತೃಪ್ತ ಬಿಜೆಪಿ ನಾಯಕರು ಹೈಕಮಾಂಡ್‌ ಬಳಿಗೆ!

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ತೀವ್ರವಾಗಿ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ನಾಯಕ  ವಿ ಸೋಮಣ್ಣ ಅವರು, ಅತೃಪ್ತಗೊಂಡಿರುವ ನಾಯಕರ ಒಗ್ಗೂಡಿಸಲು ಮುಂದಾಗಿದ್ದಾರೆ.
ಸೋಮಣ್ಣ.
ಸೋಮಣ್ಣ.

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ತೀವ್ರವಾಗಿ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ನಾಯಕ  ವಿ ಸೋಮಣ್ಣ ಅವರು, ಅತೃಪ್ತಗೊಂಡಿರುವ ನಾಯಕರ ಒಗ್ಗೂಡಿಸಲು ಮುಂದಾಗಿದ್ದಾರೆ.

ಡಿಸೆಂಬರ್ 7 ಮತ್ತು 9 ರ ನಡುವೆ ಯಾವುದೇ ಸಮಯದಲ್ಲಿ ಹೈಕಮಾಂಡ್ ತಮ್ಮನ್ನು ಕರೆಸಿ, ಮಾತುಕತೆ ನಡೆಸುವ ಸಾಧ್ಯತೆಗಳಿರುವುದರಿಂದ ಈ ಸಂದರ್ಭದಲ್ಲಿ ಅತೃಪ್ತ ನಾಯಕರನ್ನೂ ತಮ್ಮೊಂದಿಗೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಸೋಮಣ್ಣ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮತಾನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಅರವಿಂದ ಲಿಂಬಾವಳಿ, ರಮೇಶ ಜಾರಕಿಹೊಳಿ ಅವರೊಂದಿಗೆ ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೇನೆ ಎಂದು ಹೇಳಿದರು.

ಡಿಸೆಂಬರ್ 6 ರಂದು 'ಗುರುಭವನ' ಉದ್ಘಾಟನೆ ಬೆನ್ನಲ್ಲೇ ಮಠದ ಬಳಿ ಸೋಮಣ್ಣ ಅವರು ರ್ಯಾಲಿ ನಡೆಸುತ್ತಿದ್ದಾರೆ. ಈ ವೇಳೆ ವಿಜಯೇಂದ್ರ ನೇಮಕದ ಬಗ್ಗೆ ಮೌನ ಮುರಿಯುತ್ತೇನೆ ಎಂದು ಸೋಮಣ್ಣ ಅವರು ತಿಳಿಸಿದ್ದಾರೆ.

ಈ ನಡುವೆ ಸೋಮಣ್ಣ ಅವರಿಗೆ ಹಳೆ ಮೈಸೂರು ಭಾಗದ ವೀರಶೈವ-ಲಿಂಗಾಯತ ನಾಯಕ, ತುಮಕೂರು ಸಂಸದ ಜಿಎಸ್ ಬಸವರಾಜು ಅವರ ಬೆಂಬಲವೂ ದೊರೆತಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ವಿರುದ್ಧ ಗೆಲುವು ಸಾಧಿಸಲು ಸೋಮಣ್ಣ ಅವರು ನನಗೆ ಸಹಾಯ ಮಾಡಿದ್ದರು. 2024ರಲ್ಲಿ ತುಮಕೂರಿನಿಂದ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿದರೆ ನಾನು ಅವರನ್ನು ಬೆಂಬಲಿಸುತ್ತೇನೆಂದು ಬಸವರಾಜು ಅವರು ಹೇಳಿದ್ದಾರೆ.

ಈ ನಡುವೆ ಧಾರ್ಮಿಕ ಮುಖಂಡರ ಮೂಲಕ ಬಿಜೆಪಿ ತೊರೆಯದಂತೆ ಸೋಮಣ್ಣ ಅವರ ಮನಸ್ಸು ಪರಿವರ್ತನೆಗೊಳ್ಳುವಂತೆ ಮಾಡಲು ವಿರೋಧ ಪಕ್ಷದ ನಾಯಕರಾಗಿರುವ ಆರ್.ಅಶೋಕ್ ಅವರು ಪ್ರಯತ್ನಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಆದರೆ, ಲೋಕಸಭೆ ಚುನಾವಣೆಗೂ ಮುನ್ನಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com