ಆರ್ ಅಶೋಕ
ಆರ್ ಅಶೋಕ

ತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹಿರಾತು: ರಾಜ್ಯದ ಹಣ ದುರುಪಯೋಗ ಎಂದ ಆರ್ ಅಶೋಕ

ಕಾಂಗ್ರೆಸ್ ಸರ್ಕಾರ ತನ್ನೆಲ್ಲಾ ಐದು ಖಾತರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ. ಆದರೆ, ಜಾಹಿರಾತುಗಳಿಗೆ ಹಣವನ್ನು ಖರ್ಚು ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದರು. 

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತಾದ ಜಾಹಿರಾತುಗಳನ್ನು ನೀಡಲು ಸರ್ಕಾರದ ಹಣವನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಕಾಂಗ್ರೆಸ್ ಸರ್ಕಾರ ತನ್ನೆಲ್ಲಾ ಐದು ಖಾತರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ. ಆದರೆ, ಜಾಹಿರಾತುಗಳಿಗೆ ಹಣವನ್ನು ಖರ್ಚು ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆರೋಪಿಸಿದರು. 

ತೆಲಂಗಾಣ ರಾಜ್ಯದ ದಿನಪತ್ರಿಕೆಗಳಲ್ಲಿ ಜಾಹಿರಾತು ಕೊಡಲು ರಾಜ್ಯದ ಬೊಕ್ಕಸ ದುರ್ಬಳಕೆ ಮಾಡಿಕೊಂಡು ಚುನಾವಣಾ ಆಯೋಗದಿಂದಲೂ ರಾಜ್ಯ ಸರ್ಕಾರ ಛೀಮಾರಿ ಹಾಕಿಸಿಕೊಂಡಿದೆ ಎಂದು ಬಿಜೆಪಿ ನಾಯಕ ಹೇಳಿದರು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅಶೋಖ್, ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಫೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ. ಒಂದೆಡೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತಮ್ಮ ಬಳಿ ಹಣವಿಲ್ಲ ಎಂದು ಹೇಳುತ್ತಿದ್ದರೆ, ಇನ್ನೊಂದೆಡೆ ಬೇರೆ ರಾಜ್ಯಗಳಲ್ಲಿ ಜಾಹಿರಾತುಗಳಿಗೆ ಹಣ ನೀಡಿ ರಾಜ್ಯದ ಖಜಾನೆ ಖಾಲಿ ಮಾಡಲು ಯತ್ನಿಸುತ್ತಿದೆ ಎಂದು ದೂರಿದ್ದಾರೆ.

ಗ್ಯಾರೆಂಟಿಗಳನ್ನು ಜಾರಿ ಮಾಡಲಾಗದೆ ದಿನಕ್ಕೊಂದು ಕುಂಟು ನೆಪ, ನೂರೆಂಟು ಕಂಡೀಷನ್ ಹಾಕಿ ಕನ್ನಡಿಗರಿಗೆ ಮೋಸ ಮಾಡಿರುವ ಕಾಂಗ್ರೆಸ್ ಪಕ್ಷ, ಎಲ್ಲಾ 5 ಗ್ಯಾರೆಂಟಿಗಳನ್ನೂ ಚಾಚೂ ತಪ್ಪದೆ ಜಾರಿ ಮಾಡಿಬಿಟ್ಟಿದ್ದೇವೆ ಎಂದು ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಜಾಹೀರಾತು ನೀಡುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಅವರು ಆರೋಪಿಸಿದರು.

Related Stories

No stories found.

Advertisement

X
Kannada Prabha
www.kannadaprabha.com