ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಬಿ.ಎಸ್. ಯಡಿಯೂರಪ್ಪ

ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕ ವಿಳಂಬವಾಗುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕ ವಿಳಂಬವಾಗುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬಿಡಲಾಗಿದೆ. ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆಂದು ಹೇಳಿದ್ದಾರೆ.

ನಾನು ಯಾರ ಹೆಸರನ್ನೂ ಪ್ರಸ್ತಾಪಿಸುವುದಿಲ್ಲಯ ಆದರೆ ಸಲಹೆಗಳನ್ನು ಕೇಳಿದರೆ ಅವರಿಗೆ ನೀಡುತ್ತೇನೆ. ನೇಮಕಾತಿ ಬಗ್ಗೆ ಚರ್ಚೆ ನಡೆದಿದ್ದು, ವಿಳಂಬವಾಗುತ್ತಿರುವುದು ನಿಜ. ಈ ಎಲ್ಲ ವಿಚಾರಗಳ ಬಗ್ಗೆ ಕೇಂದ್ರ ನಾಯಕರು ಶೀಘ್ರವೇ ತೀರ್ಮಾನಿಸಿ ಸೂಕ್ತ ವ್ಯಕ್ತಿಗೆ ಜವಾಬ್ದಾರಿ ನೀಡಲಿದ್ದಾರೆ’ ಎಂದು ತಿಳಿಸಿದರು.

ಸ್ವಚ್ಚತಾ ಹಿ ಸೇವಾ ಅಭಿಯಾನದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಸ್ಸಾದ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ವಿರೋಧ ಪಕ್ಷದ ನಾಯಕರ ಹಾಗೂ ರಾಜ್ಯ ಪಕ್ಷದ ನಾಯಕರ ನೇಮಕ ವಿಳಂಬವಾಗಲು ಕಾರಣಗಳಿರಬೇಕು. ಆದರೆ, ಹೈಕಮಾಂಡ್ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ನಡುವೆ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಯಡಿಯೂರಪ್ಪ ಲಾಬಿ ನಡೆಸುತ್ತಿದ್ದು, ವಿಜಯೇಂದ್ರ ಅವರೂ ಕೂಡ ಆ ಹುದ್ದೆಯನ್ನು ಅಲಂಕರಿಸಲು ಉತ್ಸುಕರಾಗಿದ್ದಾರೆಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com