ಬಿಹಾರ ಸರ್ಕಾರದಂತೆ ಜಾತಿ ಗಣತಿ ವರದಿಯನ್ನು ಬಹಿರಂಗಪಡಿಸಿ: ಸರ್ಕಾರಕ್ಕೆ ಬಿ ಕೆ ಹರಿಪ್ರಸಾದ್ ಒತ್ತಾಯ

ಹಿಂದುಳಿದ ವರ್ಗಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು 2017ರಲ್ಲಿ ನಡೆಸಿರುವ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. 
ಬಿ ಕೆ ಹರಿಪ್ರಸಾದ್
ಬಿ ಕೆ ಹರಿಪ್ರಸಾದ್

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು 2017ರಲ್ಲಿ ನಡೆಸಿರುವ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. 

ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಗಳಿಗೆ ನ್ಯಾಯವನ್ನು ನೀಡಬೇಕು ಎಂಬ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತಿದ್ದು ಇದು ಪೂರಕವಾಗಿರಬೇಕು ಎಂದು ಹೇಳಿದ್ದಾರೆ. ಪ್ರಸ್ತುತ ಸರ್ಕಾರವು ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸುತ್ತಿದೆ ಎಂದು ಲಿಂಗಾಯತ ಮುಖಂಡ ಮತ್ತು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ ಕೆಲವೇ ದಿನಗಳಲ್ಲಿ ಬಿ ಕೆ ಹರಿಪ್ರಸಾದ್ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಅಧಿಕಾರ ಶ್ರೇಣಿಯಲ್ಲಿ ತಮಗೆ ಅವಕಾಶ ನೀಡಬೇಕೆಂಬ ಲಿಂಗಾಯತರ ಬೇಡಿಕೆಗಿಂತ ಭಿನ್ನವಾಗಿ, ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಹರಿಪ್ರಸಾದ್, ಹಿಂದುಳಿದ ವರ್ಗಗಳಿಗೆ ಮೂಲಭೂತ ಅಗತ್ಯಗಳಾದ ಆಹಾರ, ಬಟ್ಟೆ ಮತ್ತು ವಸತಿ ಕಲ್ಪಸಬೇಕು ಎಂದಿದ್ದಾರೆ. 

ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಸಮುದಾಯದ ಮುಖಂಡರ ಸಭೆಯಲ್ಲಿ ಹರಿಪ್ರಸಾದ್ ಅವರು, ಹಲವು ಸೂಕ್ಷ್ಮ ಮತ್ತು ಹಿಂದುಳಿದ ಸಮುದಾಯಗಳು ಅತ್ಯಂತ ಹತಾಶ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದು, ಅವರಿಗೆ ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದರು. 

ಸಮಾಜದ ಇತರ ವರ್ಗದವರು ಆಡಳಿತದ ಅಧಿಕಾರ ರಚನೆಯಲ್ಲಿ ಅವಕಾಶ ಪಡೆಯಲು ಪ್ರಯತ್ನಿಸುತ್ತಿದ್ದರೆ ಹೆಚ್ಚಿನ ಹಿಂದುಳಿದ ವರ್ಗಗಳು ಉಳಿವಿಗಾಗಿ ಹೆಣಗಾಡುತ್ತಿವೆ. 5 ಲಕ್ಷಕ್ಕಿಂತ ಕಡಿಮೆ ಇರುವ ಅನೇಕ ಹಿಂದುಳಿದ ಸಮುದಾಯಗಳು ತಮ್ಮ ಸಮುದಾಯದ ಒಬ್ಬನೇ ಒಬ್ಬ ಎಂಎಲ್‌ಎ, ಎಂಎಲ್‌ಸಿ, ಎಂಪಿ, ಮಂತ್ರಿ ಅಥವಾ ಸರ್ಕಾರಿ ನೌಕರನನ್ನು ಹೊಂದಿಲ್ಲ ಎಂದು ಟ್ವೀಟ್ ನಲ್ಲಿ ಹರಿಪ್ರಸಾದ್ ಸಮುದಾಯದ ವಸ್ತುಸ್ಥಿತಿಯನ್ನು ವಿವರಿಸುವ ಕೆಲಸ ಮಾಡಿದ್ದಾರೆ. 

ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಸಿಎಸ್ ದ್ವಾರಕಾನಾಥ್ ಅವರು ಹಲವು ವೇದಿಕೆಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಅತ್ಯಂತ ಹಿಂದುಳಿದ ಸಮುದಾಯಗಳನ್ನು ಗುರುತಿಸಿ ಬೆಂಬಲಿಸಬೇಕು ಎಂದು ಹೇಳಿದರು. ಅತ್ಯಂತ ಹಿಂದುಳಿದ ಸಮುದಾಯಗಳನ್ನು ಮೊದಲು ಗುರುತಿಸಿ ಬೆಂಬಲಿಸಲು ಜನಗಣತಿಯೇ ಸೂಕ್ತ ಮಾರ್ಗ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com