ನೀವ್ ಕರ್ಕೊಂಡು ಬಂದಿದ್ದು, ಈವಾಗ ನೀವೇ ಸರಿಪಡಿಸಿ: ಬಿಎಸ್ ವೈ ಹೆಗಲಿಗೆ ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ!

ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ.
ಯಡಿಯೂರಪ್ಪ ಮತ್ತು ಎಸ್,ಟಿ ಸೋಮಶೇಖರ್
ಯಡಿಯೂರಪ್ಪ ಮತ್ತು ಎಸ್,ಟಿ ಸೋಮಶೇಖರ್

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೋಮಶೇಖರ್ ಅಪಸ್ವರ ಎತ್ತಿದ ಬೆನ್ನಲ್ಲೇ, ಇನ್ನು ಮುಂದೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಹೇಳಿಕೆ ನೀಡದಂತೆ ಸೋಮಶೇಖರ್ ಅವರಿಗೆ ಮನವರಿಕೆ ಮಾಡಿಕೊಡುವ ಮತ್ತು ಸೂಚನೆ ನೀಡುವ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನೀಡಿದೆ.

2018 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ 17 ವಿರೋಧ ಪಕ್ಷದ ಶಾಸಕರಲ್ಲಿ ಸೋಮಶೇಖರ್ ಅವರು ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಸಹಾಯ ಮಾಡಿದ್ದರು, ಸೋಮಶೇಖರ್ ಅವರು ಉಪಚುನಾವಣೆಯಲ್ಲಿ ಗೆದ್ದು ಮಾಸ್ ಲೀಡರ್ ಆಗಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಆದ್ದರಿಂದ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ವಿರುದ್ಧವಾಗಿ ಹೋದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬಿಜೆಪಿ ಹಿಂದೇಟು ಹಾಕಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ  ನಡೆಸಿ ಸೋಮಶೇಖರ್ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು, ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ನಾವು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು, ಸೋಮಶೇಖರ್ ಕೂಡ ಇದಕ್ಕೆ ಹೊರತಾಗಿಲ್ಲ.  ಒಂದು ವೇಳೆ ಅವರು ಬಯಸಿದರೇ ಪಕ್ಷ ತೊರೆದು ಸಂತೋಷವಾಗಿರುವ ಪಕ್ಷಕ್ಕೆ ಸೇರಲಿ ಎಂದು ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು.

ಸೋಮಶೇಖರ್ ಯಾವಾಗಲೂ ತಮ್ಮ ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಹಿರಿಯ ನಾಯಕ ಸಿ ಟಿ ರವಿ ಟೀಕಿಸಿದ್ದಾರೆ.  ಅಧಿಕಾರ ಇಲ್ಲವೆಂದರೆ ಕೆಲವರಿಗೆ ಉಸಿರು ಕಟ್ಟುತ್ತೆ, ಎಸಿ ರೂಮ್‌ನಲ್ಲಿದ್ದರೆ ವಾತಾವರಣ ಚೆನ್ನಾಗಿರುತ್ತದೆ ಎಂದು ಮಾಜಿ ಶಾಸಕ ಸಿಟಿ ರವಿ ಹೇಳಿದ್ದಾರೆ.

ಇವರಿಗೆ ಯಾವಾಗಲೂ ಅಧಿಕಾರದಲ್ಲಿರಬೇಕು‌ ಆಗ ಎಲ್ಲವೂ ಚೆನ್ನಾಗಿರುತ್ತದೆ, ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂಬ ಮಾಜಿ ಸಚಿವ ಎಸ್‌ಟಿ‌ ಸೋಮಶೇಖರ್ ಹೇಳಿಕೆಗೆ ಸಿಟಿ ರವಿ ತಿರುಗೇಟು ನೀಡಿದರು.

ಮೈತ್ರಿ ಕುರಿತು ವರಿಷ್ಠರ ನಿರ್ಧಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಸೋಮಶೇಖರ್ ತೆಗೆದುಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಡಾ ಸಿಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com