ಕೇಸರಿ ಪಡೆ ಜೊತೆ ದಳಪತಿಗಳ ಸಖ್ಯ: ಜೆಡಿಎಸ್ ನಲ್ಲಿ ಮುಸ್ಲಿಮರ ಅಪಸ್ವರ; ಬಿಜೆಪಿಯಲ್ಲಿ ಒಕ್ಕಲಿಗ ನಾಯಕರ ಬೇಸರ!

2024 ರ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳಲು ಸಿದ್ಧರಾಗಿದ್ದರೂ, ಎರಡೂ ಪಕ್ಷಗಳ ಕಾರ್ಯಕರ್ತರು ಮತ್ತು ರಾಜ್ಯ ನಾಯಕರ ವಿರೋಧ ಹೆಚ್ಚುತ್ತಿದೆ.
ಸದಾನಂದಗೌಡ, ಇಬ್ರಾಹಿಂ, ಮತ್ತು ಸಿ, ಟಿ ರವಿ
ಸದಾನಂದಗೌಡ, ಇಬ್ರಾಹಿಂ, ಮತ್ತು ಸಿ, ಟಿ ರವಿ

ಬೆಂಗಳೂರು: 2024 ರ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳಲು ಸಿದ್ಧರಾಗಿದ್ದರೂ, ಎರಡೂ ಪಕ್ಷಗಳ ಕಾರ್ಯಕರ್ತರು ಮತ್ತು ರಾಜ್ಯ ನಾಯಕರ ವಿರೋಧ ಹೆಚ್ಚುತ್ತಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸೇರಿದಂತೆ ಪ್ರಮುಖ ನಾಯಕರ ಒಂದು ಭಾಗ ವಿರೋಧ ವ್ಯಕ್ತ ಪಡಿಸುತ್ತಲೇ ಇದೆ,  ಕೋಮುವಾದಿಗಳ ಜೊತೆ ಕೈ ಜೋಡಿಸಿರುವುದಕ್ಕೆ ಜೆಡಿಎಸ್ ನಿಂದ ಸಂಬಂಧ ಕಡಿದುಕೊಳ್ಳಲು ಬಯಸುತ್ತಿದ್ದಾರೆ.

ಸೀಟು ಹಂಚಿಕೆಗೆ ಸಂಬಂಧಿಸಿದಂತೆ  ಬಿಜೆಪಿ ನಾಯಕರ ಸಾರ್ವಜನಿಕ ನಿಲುವು ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಹಿನ್ನಡೆಯಾಗುವ ಸಾಧ್ಯತೆಯಿದೆ, ಆದರೆ ಸೀಟು ಹಂಚಿಕೆ ಇನ್ನೂ ಅಂತಿಮಗೊಂಡಿಲ್ಲ. ಮೈತ್ರಿ ಸಂಬಂಧ ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದಿರುವ ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದ ಗೌಡ ,ಬಿಜೆಪಿ ಹೈಕಮಾಂಡ್‌ ವಿರುದ್ಧ ದನಿ ಎತ್ತಿದ್ದಾರೆ, ಪಕ್ಷದ ಶೇ.75 ರಷ್ಟು ನಾಯಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸದಾನಂದಗೌಡರ ಹೇಳಿಕೆಯನ್ನು ಉಲ್ಲೇಖಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈತ್ರಿ ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಇನ್ನೂ ಅಂತಿಮಗೊಂಡಿಲ್ಲ ಎಂದು ಭಾನುವಾರ ಸಮರ್ಥಿಸಿಕೊಂಡರು. ಉಭಯ ಪಕ್ಷಗಳ ತಳಮಟ್ಟದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೇ ಮೈತ್ರಿ ಕಷ್ಟವಾಗಲಿದೆ ಎಂದು ಹಿರಿಯ ನಾಯಕ ಸಿಟಿ ರವಿ ಅಭಿಪ್ರಾಯಪಟ್ಟಿದ್ದಾರೆ.

ಹೈಕಮಾಂಡ್ ಮೈತ್ರಿ ನಿರ್ಧಾರವನ್ನು ತೆಗೆದುಕೊಂಡ ದಿನ, ಪಕ್ಷದ ಪ್ರಧಾನ ಕಚೇರಿಯಿಂದ ನನಗೆ ತಿಳಿಸಲಾಯಿತು ಆದರೆ ಹೆಚ್ಚು ಮಾತನಾಡಲಿಲ್ಲ. ನಾನು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಉಸ್ತುವಾರಿ ವಹಿಸಿದ್ದೇನೆ ಮತ್ತು ಕಾರ್ಯನಿರತವಾಗಿದ್ದೇನೆ ಎಂದು ಸಿ,ಟಿ ರವಿ ತಿಳಿಸಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರ್ಯರೂಪಕ್ಕೆ ಬರಲಿಲ್ಲ, ಏಕೆಂದರೆ ವೇದಿಕೆಯಲ್ಲಿ ಮಾತ್ರ ನಾಯಕರು ಕೈಜೋಡಿಸಿದರು, ಆದರೆ ಅದು ಪಕ್ಷದ ಕಾರ್ಯಕರ್ತರಿಗೆ ಸರಿಯಾಗಿ ಹೋಗಲಿಲ್ಲ. ಆದರೂ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಸನ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ನಾಯಕರು ತಮ್ಮದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಯಸಿದ್ದು, ಜೆಡಿಎಸ್ 2-3 ಸ್ಥಾನಗಳಿಗೆ ತೃಪ್ತಿಪಡಬೇಕಾಗಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com