ಬಿಜೆಪಿ-ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಇನ್ನೂ ನಿರ್ಧಾರವಾಗಿಲ್ಲ- ಹೆಚ್ ಡಿ ದೇವೇಗೌಡ

ಸೀಟು ಹಂಚಿಕೆ ಕುರಿತು ಬಿಜೆಪಿ ಜೊತೆಗೆ ಇನ್ನೂ ಯಾವುದೇ ಮಾತುಕತೆಗಳು ನಡೆಸಿಲ್ಲ. ದಸರಾ ಕಳೆದ ಬಳಿಕ ಚರ್ಚೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್'ಡಿ.ದೇವೇಗೌಡ ಅವರು ಸೋಮವಾರ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಪೂಜೆ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಪೂಜೆ ಸಲ್ಲಿಸಿದರು.

ಮಂಗಳೂರು: ಸೀಟು ಹಂಚಿಕೆ ಕುರಿತು ಬಿಜೆಪಿ ಜೊತೆಗೆ ಇನ್ನೂ ಯಾವುದೇ ಮಾತುಕತೆಗಳು ನಡೆಸಿಲ್ಲ. ದಸರಾ ಕಳೆದ ಬಳಿಕ ಚರ್ಚೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್'ಡಿ.ದೇವೇಗೌಡ ಅವರು ಸೋಮವಾರ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ಈಗಾಗಲೇ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಜೊತ ಮೈತ್ರಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಸತ್ ಅಧಿವೇಶನ ಕಳೆದ ಬಳಿಕ ಆರೋಗ್ಯ ಸುಧಾರಿಸಿದರೆ ನಾನು, ಇಲ್ಲವೇ ಕುಮಾರಸ್ವಾಮಿ ಅವರು ಮತ್ತೆ ಕೇಂದ್ರ ಗೃಹಮಂತ್ರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಚುನಾವಣೆಗೆ ಇನ್ನೂ ನಾಲ್ಕು ತಿಂಗಳುಗಳಿವೆ. ದಸರಾ ನಂತರ ಸೀಟು ಹಂಚಿಕೆ ಕುರಿತು ನಿರ್ಧಾರವಾಗಲಿದೆ ಎಂದು ಹೇಳಿದರು.

ಮೈತ್ರಿಗೆ ಮೊದಲೇ ಪಕ್ಷದ 19 ಶಾಸಕರು ಹಾಗೂ 8 ವಿಧಾನ ಪರಿಷತ್ ಸದಸ್ಯರು, ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು ಸುತ್ತುಗಳ ಮಾತುಕತೆ ನಡೆಸಲಾಗಿದೆ. ಆ ಬಳಿಕವೇ ಕುಮಾರಸ್ವಾಮಿ ಅವರು ಗೃಹಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ 28ರಲ್ಲಿ ಎಲ್ಲ ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿದೆ. ಆ ಕಾರಣಕ್ಕೆ ಬಿಜೆಪಿ ಮತ್ತು ಜೆಡಿಎಸ್ ಒಂದುಗೂಡಿ ಚುನಾವಣೆ ಎದುರಿಸುವ ನಿರ್ಧಾರಕ್ಕೆ ಬಂದಿದ್ದೇವೆಂದು ತಿಳಿಸಿದರು.

'ಜಾತಿ ಆಧಾರದಲ್ಲಿ ಮತ ವಿಭಜನೆಯ ಬಗ್ಗೆ ನಾನು ಈಗ ವಾದ ಮಾಡಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾವಾರು ಮತ ಹಂಚಿಜೆ ಪ್ರಕಾರ ಬಿಜೆಪಿಗೆ ಶೇ 33, ಕಾಂಗ್ರೆಸ್ಗೆ ಶೇ 40 ಹಾಗೂ ಜೆಡಿಎಸ್ ಗೆ ಶೇ 22ರಷ್ಟು ಮತಗಳು ಸಿಕ್ಕಿವೆ‌. ಈ ಬಾರಿಗೆ ಯಾರಿಗೆ ಮತ ಹಾಕಬೇಕು ಎಂಬುವುದನ್ನು ಮತದಾರರು ತೀರ್ಮಾನ ಮಾಡುತ್ತಾರೆ ಎಂದರು.

ವಿಪಕ್ಷಗಳ ಮೈತ್ರಿಕೂಟ INDIA ಕುರಿತ ಪ್ರಶ್ನೆಗೆ ಉತ್ತರಿಸಿ, NDA ಅಥವಾ I.N.D.I.A ಆಗಿರಲಿ ಪ್ರತಿಪಕ್ಷಗಳ ಹೊಸ ಮೈತ್ರಿಯ ಬಗ್ಗೆ ನಾವು ಚರ್ಚಿಸುವುದಿಲ್ಲ. ನನಗೀಗ 91 ವರ್ಷ ವಯಸ್ಸು. ಈ ಮೈತ್ರಿಗಳ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು.

ಶಿವಮೊಗ್ಗದಲ್ಲಿ ನಡೆದ ಹಿಂಸಾಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ, ಇದೊಂದು ಸೂಕ್ಷ್ಮ ಪ್ರದೇಶವಾಗಿದ್ದು, ಈ ವಿಷಯಗಳಲ್ಲಿ ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಆಶ್ಲೇಷ ಬಲಿ ಸೇವೆ ನೆರವೇರಿಸಿದ ದೇವೇಗೌಡ
ದೇವೇಗೌಡ ಅವರು ತಮ್ಮ ಪತ್ನಿ ಚನ್ನಮ್ಮ ಅವರೊಟ್ಟಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ಹಾಗೂ ತುಲಾಭಾರ ಸೇವೆ ನೆರವೇರಿಸಿದರು.

ದೇವೇಗೌಡರು 91 ಕೆ.ಜಿ., ಚೆನ್ನಮ್ಮ ಅವರು 68 ಕೆ.ಜಿ. ತೂಕ ಇದ್ದು, ಅಷ್ಟು ತೂಕದ ಧಾನ್ಯ ಸಮರ್ಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com