ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯನೂರು ಮಂಜುನಾಥ್ ನೇಮಕ

ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಆಯನೂರು ಮಂಜುನಾಥ್
ಆಯನೂರು ಮಂಜುನಾಥ್

ಬೆಂಗಳೂರು : ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ವಿಚಾರಧಾರಣೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮಾಧ್ಯಮಗಳಲ್ಲಿ ಬಿಂಬಿಸಲು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆಯನೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿ ತೊರೆದು  ಜೆಡಿಎಸ್ ಸೇರ್ಪಡೆಯಾಗಿದ್ದರು. ಜೆಡಿಎಸ್ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಿತ್ತು. ಆದರೆ, ಮಂಜುನಾಥ್ ಸೋಲನುಭವಿಸಿದರು. ಬಳಿಕ ಕಳೆದ ಆಗಸ್ಟ್ 24ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಆಯನೂರು ಮಂಜುನಾಥ್ ಅವರಿಗೆ ಪಕ್ಷ ಉನ್ನತ ಸ್ಥಾನ ಕೊಟ್ಟಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com