ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಜರಿ: ಕೆಪಿಸಿಸಿ ಕಾರ್ಯಾಧ್ಯಕ್ಷರ ಬದಲಾವಣೆಗೆ ನಿರ್ಧಾರ

2024 ರ ಲೋಕಸಭೆ ಚುನಾವಣೆಗೆ ಮುನ್ನ, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಘಟಕಕ್ಕೆ ಹೊಸ ಕಾರ್ಯಾಧ್ಯಕ್ಷರನ್ನು ನೇಮಿಸಲು ಯೋಜಿಸುತ್ತಿದೆ, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿರುವ ಕೆಲ ಸಚಿವರನ್ನು ಬದಲಾಯಿಸುವ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.
ವಿನಯ್ ಕುಮಾರ್ ಸೊರಕೆ, ಅಂಜಲಿ ನಿಂಬಾಳ್ಕರ್  ಜಿ ಸಿ ಚಂದ್ರಶೇಖರ್
ವಿನಯ್ ಕುಮಾರ್ ಸೊರಕೆ, ಅಂಜಲಿ ನಿಂಬಾಳ್ಕರ್ ಜಿ ಸಿ ಚಂದ್ರಶೇಖರ್
Updated on

ಬೆಂಗಳೂರು: 2024 ರ ಲೋಕಸಭೆ ಚುನಾವಣೆಗೆ ಮುನ್ನ, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಘಟಕಕ್ಕೆ ಹೊಸ ಕಾರ್ಯಾಧ್ಯಕ್ಷರನ್ನು ನೇಮಿಸಲು ಯೋಜಿಸುತ್ತಿದೆ, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿರುವವರನ್ನು ಬದಲಾಯಿಸುವ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಎಲ್ಲ ಪ್ರಮುಖ ಸಮುದಾಯಗಳ ನಾಯಕರ ಹೆಸರನ್ನು ಕೆಪಿಸಿಸಿ ಪ್ರಸ್ತಾಪಿಸಿರುವುದರಿಂದ ಮತಗಳನ್ನು ಸೆಳೆಯಲು ಜಾತಿ ಸಮೀಕರಣದಲ್ಲಿ ಸಮತೋಲನ ಸಾಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಈಶ್ವರ ಖಂಡ್ರೆ ಅವರ ಸ್ಥಾನಕ್ಕೆ ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್, ಒಕ್ಕಲಿಗ ಮತ್ತು ವಿನಯ್ ಕುಲಕರ್ಣಿ, ಪಂಚಮಸಾಲಿ ಪಂಗಡಕ್ಕೆ ಸೇರಿದ ವೀರಶೈವ ಲಿಂಗಾಯತರನ್ನು ನೇಮಿಸಲಾಗುವುದು ಎಂದು ತಿಳಿದು ಬಂದಿದೆ.

ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಎಸ್‌ಸಿ ಎಡ ಸಮುದಾಯದಿಂದ 2024 ರಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವುದರಿಂದ ಹುದ್ದೆ ತೊರೆಯುವಂತೆ ಹೇಳುವ ಸಾಧ್ಯತೆಯಿದೆ. ಅವರ ಸ್ಥಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಷ್ಠಾವಂತ ರಾಯಚೂರು ಜಿಲ್ಲಾ ಕಾಂಗ್ರೆಸ್‌ ಮುಖ್ಯಸ್ಥರ  ವಸಂತಕುಮಾರ್  ನೇಮಿಸಲಾಗುವುದು ಎಂದು ಹೇಳಲಾಗುತ್ತಿದೆ.

ಮಹಿಳಾ ಕೋಟಾದಡಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಹಾಗೂ ಹಿಂದುಳಿದ ಈಡಿಗ ಸಮುದಾಯದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಹೆಸರೂ ಪ್ರಸ್ತಾಪವಾಗಿದೆ. ಪಕ್ಷದೊಳಗಿನ  ತಮ್ಮ ವಿರೋಧಿಗಳನ್ನು ಎದುರಿಸಲು ಸೊರಕೆ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com