ಸರ್ಕಾರದ ವಿರುದ್ಧ ಇಂದು, ನಾಳೆ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಬಿಜೆಪಿ, ಸೋಮವಾರ ಮತ್ತು ಮಂಗಳವಾರ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಬಿಜೆಪಿ, ಸೋಮವಾರ ಮತ್ತು ಮಂಗಳವಾರ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಹೇಳಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಅವರು, ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯ ಸರ್ಕಾರ ಎಟಿಎಂ ಆಗಿ ಪರಿವರ್ತನೆಯಾಗಿದೆ. ರಾಜ್ಯದಲ್ಲಿ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌, ಬರ ಪ್ರದೇಶದ ರೈತರಿಗೆ ಪರಿಹಾರ ನೀಡಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಇದನ್ನು ಖಂಡಿಸಿ ರಾಜ್ಯದ ಎಲ್ಲಾ ಮಂಡಲ, ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಹೆಸರಾಂತ ವ್ಯಕ್ತಿಗಳಿಂದ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಐಟಿ ದಾಳಿಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಗಿದೆ. ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಿ.ಟಿ.ರವಿ ಅವರು ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಶೇ.60 ಕಮಿಷನ್ ಸರ್ಕಾರವಾಗಿ ಬದಲಾಗಿದೆ. ಹಿರಿಯ ಕಲಾವಿದ ಪಂಡಿತ್ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮಕ್ಕೆ ಸಂಭಾವನೆಯಾಗಿ 5 ಲಕ್ಷ ರೂಪಾಯಿ ನೀಡುವಂತೆ ಹಾಗೂ ಅಧಿಕಾರಿಗಳಿಗೆ 3 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ. ಇದು ಸರ್ಕಾರ ಶೇ.60 ಕಮಿಷನ್ ಸರ್ಕಾರವಾಗಿದೆ ಎಂಬುದನ್ನು ಸಾಬೀತುಪಡಿಸಿದೆ. ತಮ್ಮ ಸರ್ಕಾರ ಭ್ರಷ್ಟಾಚಾರ ಮುಕ್ತ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರ ಕಣ್ಣಿನ ಮುಂದೆಯೇ ಇದು ನಡೆದಿದೆ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com