
ಹುಬ್ಬಳ್ಳಿ: ಐಟಿ ಅಧಿಕಾರಿಗಳು ದಾಳಿ ವೇಳೆ ಕೋಟ್ಯಂತರ ನಗದು ವಶಪಡಿಸಿಕೊಂಡ ಬೆನ್ನಲ್ಲೇ ಬಿಜೆಪಿ ನಾಯಕರು ಭ್ರಷ್ಟಾಚಾರ ವಿಚಾರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಂಚರಾಜ್ಯಗಳ ಚುನಾವಣೆಗಾಗಿ ಸಿದ್ದರಾಮಯ್ಯ ಸರ್ಕಾರ 1000 ಕೋಟಿ ರೂ.ಗಳನ್ನು ರಾಜ್ಯದಲ್ಲಿ ಸಂಗ್ರಹಿಸುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಅಕ್ರಮವಾಗಿ 1,000 ಕೋಟಿ ರೂ.ಗಳನ್ನು ಸಂಗ್ರಹಿಸಲು ಮುಂದಾಗಿದೆ ಎಂಬ ಮಾಹಿತಿ ನನ್ನ ಗಮನಕ್ಕೆ ಬಂದಿದೆ. ಐಟಿ ದಾಳಿಯ ವೇಳೆ ಸಿಕ್ಕ ಹಣವು ರಟ್ಟಿನ ಬಾಕ್ಸ್‌ಗಳಲ್ಲಿದ್ದವು. ಇದು ಸರ್ಕಾರದ ಉದ್ದೇಶವನ್ನು ತೋರಿಸಿವೆ. ವಶಪಡಿಸಿಕೊಂಡ ಹಣ ಕಾಂಗ್ರೆಸ್‌ಗೆ ಸೇರಿದ್ದಾಗಿದೆ.
ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಐಟಿ ದಾಳಿ ನಡೆಸಲಾಗಿದ್ದು, ಒಬ್ಬರ ಮನೆಯಲ್ಲಿ 42 ಕೋಟಿ ರೂ, ಮತ್ತೊಬ್ಬರ ಮನೆಯಲ್ಲಿ 45 ಕೋಟಿ ರೂ. ಪತ್ತೆಯಾಗಿದೆ. ಇದು ಕಾಂಗ್ರೆಸ್ ನಾಯಕರಿಗೆ ಸೇರಿದ ನಗದು ಹಣ ಎಂದು ಸಂತೋಷ್ ಎಂಬಾತ ಒಪ್ಪಿಕೊಂಡಿದ್ದಾನೆ. ಪತ್ತೆಯಾದ ಹಣವನ್ನು ಕಮಿಷನ್ ಮೂಲಕ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಸಮಾನಾರ್ಥಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ
Advertisement