ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ವಜಾ! ವೈರಲ್ ಪತ್ರದ ಅಸಲಿಯತ್ತೇನು?

ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಹೀಗೊಂದು ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಬ್ರಾಹಿಂ ವಜಾಗೊಳಿಸಿರುವ ಪತ್ರ ವೈರಲ್
ಇಬ್ರಾಹಿಂ ವಜಾಗೊಳಿಸಿರುವ ಪತ್ರ ವೈರಲ್
Updated on

ಬೆಂಗಳೂರು: ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಹೀಗೊಂದು ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆದರೆ ಈ ಪತ್ರ ನಕಲಿ ಎಂದು ತಿಳಿದು ಬಂದಿದೆ. ಈ ನಕಲಿ ಪತ್ರ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡರ ಲೆಟರ್ ಹೆಡ್ ನಲ್ಲಿದೆ. ಎಲ್ಲಾ ಮಾಧ್ಯಮದವರ ಗಮನಕ್ಕೆ, ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ವಜಾಗೊಳಿಸಲಾಗಿದೆ ಎಂದು ಬರೆಯಲಾಗಿದೆ. ಅದರಲ್ಲಿ ದೇವೇಗೌಡರ ಸಹಿಯಂತೆ ನಕಲಿ ಮಾಡಲಾಗಿದೆ.

ಜೆಡಿಎಸ್ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ತಾವು ಮುಜುಗರಕ್ಕೀಡಾಗುವಂತಾಗಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com