ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ರು: ಹೆಚ್'ಡಿಕೆಗೆ ಸಚಿವ ಸುಧಾಕರ್ ಟಾಂಗ್

ಮೋದಿ ಪ್ರಧಾನಿ ಆದರೇ ದೇಶ ಬಿಟ್ಟು ಹೋಗುತ್ತೇನೆ ಅಂದಿದ್ರು. ಇದೀಗ ಅವರೇ ಪದೇಪದೇ ಹೋಗಿ ಮೋದಿಯವರನ್ನ ಭೇಟಿ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಟಾಂಗ್ ನೀಡಿದ್ದಾರೆ.
ಸಚಿವ ಸುಧಾಕರ್.
ಸಚಿವ ಸುಧಾಕರ್.
Updated on

ಮೈಸೂರು: ಮೋದಿ ಪ್ರಧಾನಿ ಆದರೇ ದೇಶ ಬಿಟ್ಟು ಹೋಗುತ್ತೇನೆ ಅಂದಿದ್ರು. ಇದೀಗ ಅವರೇ ಪದೇಪದೇ ಹೋಗಿ ಮೋದಿಯವರನ್ನ ಭೇಟಿ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಟಾಂಗ್ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದ ವಿರುದ್ಧ ವೈಎಸ್ಟಿ, ಎಸ್ಎಎಸ್‌ಟಿ ಹಣ ಎಂದೆಲ್ಲಾ ಆರೋಪಿಸುತ್ತಿದ್ದಾರೆ. ವೈಯಕ್ತಿಕವಾಗಿ ಅವರ ಬಗ್ಗೆ ಬಹಳ ಗೌರವವಿದೆ. ನಾವೂ ಎಚ್‌ಡಿಕೆ ಟ್ಯಾಕ್ಸ್ ಎಂದೆಲ್ಲಾ ಹೆಸರು ಕೊಡಬಹುದು. ಅವರ ರಾಜಕೀಯ ನಡೆ ಬಗ್ಗೆ ಜನರಿಗೆ ಗೊತ್ತಿದೆ. ಹಳೇ ಮೈಸೂರು ಭಾಗದಲ್ಲಿ ಅವರ ಅವಕಾಶದವಾದಿ ರಾಜಕಾರಣ ಎಲ್ಲರಿಗೂ ಗೊತ್ತಿದೆ. ರಾಜ್ಯಾಧ್ಯಕ್ಷರನ್ನ ಬಿಟ್ಟು ಕುಟುಂಬ ರಾಜಕಾರಣ ಮಾಡುತ್ತಾರೆ. ಇಂತವರು ಕಾಂಗ್ರೆಸ್ ಬಗ್ಗೆ ಆರೋಪ ಮಾಡ್ತಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿ, ‘ಬಿಜೆಪಿಯವರು ಹತಾಶರಾಗಿದ್ದಾರೆ. ಅವರಿಗೆ ಗಾಯದ ಮೇಲೆ ಉಪ್ಪು ಸವರಿದಂತಾಗಿದ್ದು, ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮೋದಿ ಪರವಾದ ಅಲೆ ಇಲ್ಲ. ಅವರ ಮುಖ ನೋಡಿ ಯಾರೂ ಮತ ಹಾಕುವುದಿಲ್ಲ’ ಎಂದು ಹೇಳಿದರು.

ಕಾಂಗ್ರೆಸ್ ನ ಗ್ಯಾರಂಟಿಗಳು ಜನಮನ್ನಣೆ ಗಳಿಸಿವೆ. ಈಗಾಗಲೇ ನಾಲ್ಕು ಗ್ಯಾರಂಟಿಗಳು ಜನರನ್ನ ತಲುಪುತ್ತಿವೆ. ಇದು ಬಿಜಪಿಯವರ ನಿದ್ದೆ ಕೆಡಿಸಿದೆ. ಹಾಗಾಗಿ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಬಿಜೆಪಿ ಕಳೆದ ಹಲವು ವರ್ಷಗಳಿಂದ ಪ್ರಬಲವಾಗಿರುವವರ ಮೇಲೆ ದಾಳಿ‌ ಮಾಡುತ್ತಿದೆ. ಐಟಿ, ಇಡಿ ಮೂಲಕ ಪ್ರತಿ ಪಕ್ಷಗಳ ಹತ್ತಿಕ್ಕುವ ಕೆಲಸ ಆಗುತ್ತಿದೆ. ಜಾರಿ ನಿರ್ದೇಶನಾಲಯದ ಸಂಸ್ಥೆಗಳನ್ನ ತಮ್ಮ ಅಣತೆಯಂತೆ ಬಳಸಿಕೊಳ್ಳುತ್ತಿದ್ದಾರೆ. ಸುಖಾ ಸುಮ್ಮನೆ ಗೊಂದಲ ಸೃಷ್ಠಿ  ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com