ಮೋದಿ- ಅಮಿತ್ ಶಾ ಜೊತೆ ವ್ಯಕ್ತಿಗತ ಭಿನ್ನಮತವಿಲ್ಲ, ಸೈದ್ಧಾಂತಿಕ ವಿರೋಧ ಮಾತ್ರ; ಕುಮಾರಸ್ವಾಮಿ ಮೇಲೆ ನನಗೆ ನಂಬಿಕೆ ಇಲ್ಲ: ಇಬ್ರಾಹಿಂ

ಲೋಕಸಭೆ ಚುನಾವಣೆಗೆ ಇನ್ನೂ ಸಮಯವಿದೆ, ಬಿಜೆಪಿ ಜೊತೆಗಿನ ಮೈತ್ರಿ ವಿಚಾರವನ್ನು ಮರು ಪರಿಶೀಲಿಸುವಂತೆ ಎಚ್.ಡಿ. ದೇವೇಗೌಡರಿಗೆ ಮತ್ತೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ದೇವೇಗೌಡ
ಎಚ್.ಡಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ದೇವೇಗೌಡ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ನಾನೇ ಎಂದು ಹೇಳಿಕೊಳ್ಳುತ್ತಲೇ ಇರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮುಂದಿನ ಕ್ರಮ ಕೈಗೊಳ್ಳುವ ಮುನ್ನ ಭಾರತದ ಕೆಲವು ರಾಜ್ಯಗಳು ಹಾಗೂ ವಿದೇಶದಲ್ಲಿ ತಮ್ಮ ಸ್ನೇಹಿತ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳುವ ಮೊದಲು, ಸಲಹೆಗಾಗಿ ಸ್ನೇಹಿತರನ್ನು ಸಂಪರ್ಕಿಸಲು ಇಬ್ರಾಹಿಂ ಬಯಸಿದ್ದಾರೆ.  ಹೀಗಾಗಿ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.  ಬುಧವಾರ ತಮ್ಮ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ ಎಂದು ಮೂಲವೊಂದು ತಿಳಿಸಿದೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಮಾಜಿ ಪ್ರಧಾನಿ ನಿರ್ಧಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು  ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ, ನ್ಯಾಯಾಲಯಕ್ಕೆ ತೆರಳುವುದು ಸೇರಿದಂತೆ ತಮ್ಮ ಮುಂದಿರುವ ಆಯ್ಕೆಗಳ ಬಗ್ಗೆ ಅಳೆದು ತೂಗುತ್ತಿದ್ದಾರೆ.  ಇಬ್ರಾಹಿಂ ಅವರಿಗೆ ಎನ್‌ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಆಫರ್  ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಜೆಡಿಎಸ್‌ ಜಿಲ್ಲಾ ಘಟಕಗಳ ಅಧ್ಯಕ್ಷರು, ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಯಾರನ್ನೂ ನಾನು ಬಹಿರಂಗವಾಗಿ ಕರೆಯುತ್ತಿಲ್ಲ. ಲೋಕಸಭೆ ಚುನಾವಣೆಗೆ ಇನ್ನೂ ಸಮಯವಿದೆ, ಮಾತನಾಡೋಣ ಎಂದು ಅವರಿಗೆಲ್ಲ ಹೇಳಿದ್ದೇನೆ ಎಂದರು. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿಶ್ ಶಾ ಅವರಿಗೆ ಗೌರವ ಕೋಡೋಣ. ಅವರ ಜೊತೆ ವ್ಯಕ್ತಿಗತವಾಗಿ ಯಾವುದೇ ಭಿನ್ನಮತವಿಲ್ಲ. ಸೈದ್ಧಾಂತಿಕವಾಗಿ ವಿರೋಧವಿದೆ ಎಂದರು.

ಕೇರಳ, ತಮಿಳುನಾಡು, ರಾಜಸ್ಥಾನ ಬಳಿಕ ಕಾರ್ಯಕ್ರಮದ ನಿಮಿತ್ತ ಉದಯಪುರಕ್ಕೆ ಹೋಗುತ್ತಿದ್ದೇನೆ. ಇದೇ​ 26 ರಂದು ಮುಂಬೈಗೆ ಹೋಗುತ್ತಿದ್ದೇನೆ. ಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡುತ್ತೇನೆ. ಒಂದೇ ಕಡೆ ಕುಳಿತುಕೊಳ್ಳುವವ ನಾನಲ್ಲ. ನಾನು ತ್ರಿಲೋಕ ಸಂಚಾರಿ ಎಂದು ಹೇಳಿದರು. ನೀವು ತಾಂತ್ರಿಕವಾಗಿ, ಮಾನಸಿಕವಾಗಿ ಇನ್ನೂ ಜೆಡಿಎಸ್​ನಲ್ಲಿ ಇದ್ದೀರಾ ಎಂಬ ಪ್ರಶ್ನೆಗೆ, ನೂರಕ್ಕೆ ನೂರರಷ್ಟು ನಾನು  ಜೆಡಿಎಸ್​ನಲ್ಲಿದ್ದೇನೆ. ನಾನೇ ಅದರ ಅಧ್ಯಕ್ಷ. ದೇವೇಗೌಡರು ತಪ್ಪು ಮಾಡಿದ್ದಾರೆ ಎಂದು ನೋವು ಆಗಿಲ್ಲ. ಅದನ್ನು ಸರಿಪಡಿಸಿಕೊಂಡು ಹೋಗಬೇಕಿದೆ. ನಮ್ಮ ಸಂಸ್ಕೃತಿಗೆ ಅನುಗುಣವಾಗಿ ಹೋಗಬೇಕಿದೆ ಎಂದರು.

ಮೂಲಗಳ ಪ್ರಕಾರ, ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ನಾಗರಿಕ ವಿಮಾನಯಾನ ಸಚಿವರಾಗಿದ್ದಾ ಇಬ್ರಾಹಿ ಮತ್ತು ಗೌಡರ ನಡುವೆ  ಉತ್ತಮ ಸಂಪರ್ಕವಿತ್ತು, ಅದರ ಜೊತೆಗೆ ಇತರ ದೇಶಗಳಲ್ಲಿ ಬೆಂಬಲಿಗರನ್ನು ಹೊಂದಿದ್ದಾರೆ.

ಲೋಕಸಭೆ ಚುನಾವಣೆಗೆ ಇನ್ನೂ ಸಮಯವಿದೆ, ಬಿಜೆಪಿ ಜೊತೆಗಿನ ಮೈತ್ರಿ ವಿಚಾರವನ್ನು ಮರು ಪರಿಶೀಲಿಸುವಂತೆ ಎಚ್.ಡಿ. ದೇವೇಗೌಡರಿಗೆ ಮತ್ತೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಜೊತೆಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯಗಳಿಲ್ಲ, ಆದರೆ ಸೈದ್ಧಾಂತಿಕ ಕಾರಣಗಳಿಗಾಗಿ ಅವರನ್ನು ವಿರೋಧಿಸುತ್ತೇವೆ, ಆದರೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದರು.

ನಾನು ಕೋರ್ ಕಮಿಟಿಯನ್ನು ರಚಿಸಿದೆ ಮತ್ತು ಪದಾಧಿಕಾರಿಗಳನ್ನು ನೇಮಿಸಿದೆ. ಈ ಅಧಿಕಾರ  ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಮಾತ್ರ ಇರುವುದು . ರಾಜ್ಯಾಧ್ಯಕ್ಷರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಸಭೆ ನಡೆಸಿ ಮೂರನೆ ಎರಡರಷ್ಟು ಸದಸ್ಯರ ಬೆಂಬಲದೊಂದಿಗೆ ಅವರನ್ನು ಪದಚ್ಯುತಗೊಳಿಸಲು ನೋಟಿಸ್ ನೀಡಬೇಕು ಎಂದು ಹೇಳಿದ್ದಾರೆ.

ಇದರ ನಡುವೆ ದೇವೇಗೌಡರು ಭಾನುವಾರದಂದು ಅಮಿತ್ ಶಾ  ಅವರ ಜನ್ಮದಿನಕ್ಕೆ ಟ್ವಿಟ್ಟರ್ ನಲ್ಲಿ ಶುಭ ಹಾರೈಸಿದರು. “ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಗೆ ನನ್ನ ಜನ್ಮದಿನದ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘ ಸಾರ್ಥಕ ಜೀವನವನ್ನು ನೀಡಲಿ ಎಂದು ಅವರು ಬರೆದಿದ್ದಾರೆ.

ಭಗವಂತ ಅವರಿಗೆ ಉತ್ತಮ ಆರೋಗ್ಯ ಕರುಣಿಸಲಿ ಮತ್ತು ದೀರ್ಘ ಕಾಲ ಜನಸೇವೆ ಮಾಡುವ ಚೈತನ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹಾಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com