ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಚಿವರ ವಿರುದ್ಧ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ನಂತರ, ಈಗ ಸಚಿವರು ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಣಿ ಮತ್ತು ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಕೆಲವು ಶಾಸಕರು ಪಕ್ಷದ ಶಿಸ್ತನ್ನು ಮೀರಿ ಬಹಿರಂಗವಾಗಿ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ ಅವರಿಗೆ ಲಗಾಮು ಹಾಕಿ ಎಂದು ಮನವಿ ಮಾಡಿದ್ದಾರೆ.
ಶಾಸಕ ಬಸವರಾಜುರವರು ಸರ್ಕಾರದ ವಿರುದ್ದ ಮಾತನಾಡುತ್ತಿದ್ದಾರೆ. ಇಂತಹವರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಇವರನ್ನು ಕರೆದು ಬುದ್ಧಿ ಹೇಳಿ ಹದ್ದುಬಸ್ತಿನಲ್ಲಿರುವಂತೆ ತಿಳಿ ಹೇಳಿ ಎಂದು ಸಚಿವರು ಮನವಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಶಾಸಕರುಗಳು ತಮ್ಮ ಕೆಲಸ ಆಗುತ್ತಿಲ್ಲ. ಸಚಿವರು ತಮ್ಮ ಮಾತು ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದು ಸಚಿವರಿಗೆ ತಿಳಿ ಹೇಳಿದ್ದರು. ಹಾಗೆಯೇ, ಯಾವುದೇ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸದಂತೆಯೂ ತಾಕೀತು ಮಾಡಿದ್ದರು. ಇಷ್ಟೆಲ್ಲ ಆದರೂ ಶಾಸಕರು ಹಾಗೂ ಸಚಿವರುಗಳ ನಡುವಿನ ಮಾತಿನ ಚಕಮಕಿಗಳು, ಪತ್ರ ಸಮರ ಮುಂದುವರೆದೇ ಇದೆ.
Advertisement