ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿಯ 20 ಶಾಸಕರು; ಅವರ ಜೊತೆಯಲ್ಲಿಯೇ ಲೋಕಸಭೆ ಚುನಾವಣೆ: ರಾಜು ಕಾಗೆ

ಬಿಜೆಪಿಯಿಂದ 20 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ. ಅವರ ಜೊತೆಯಲ್ಲಿಯೇ ನಾವು ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.
ರಾಜು ಕಾಗೆ
ರಾಜು ಕಾಗೆ

ಬೆಳಗಾವಿ: ಬಿಜೆಪಿಯಿಂದ 20 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ. ಅವರ ಜೊತೆಯಲ್ಲಿಯೇ ನಾವು ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮಲ್ಲಿ ಯಾವುದೇ ಒಳ ಜಗಳವಿಲ್ಲ. 135 ಶಾಸಕರೂ ಒಟ್ಟಾಗಿದ್ದೇವೆ ಎಂದರು.

ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಅನೇಕರು ಕಾಂಗ್ರೆಸ್‌ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯ 20 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಬರುತ್ತಾರೆ. ಅವರನ್ನು ಕರೆದುಕೊಂಡು ನಾವು ಲೋಕಸಭಾ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು.

ಯಾವ ಲೋಪದೋಷವು ನಮ್ಮಲಿಲ್ಲಾ ನಾವೆಲ್ಲ ಕಾಂಗ್ರೆಸ್ ನಾಯಕರು ಒಟ್ಟಾಗಿದ್ದೇವೆ. ಈ ಐದು ವರ್ಷ ಒಳ್ಳೆಯ ಆಡಳಿತ ಕೊಡಲಿದ್ದೇವೆ, ಇನ್ನು 15 ರಿಂದ 20 ವರ್ಷಗಳ ಕಾಲ ನಾವೇ ಆಡಳಿತ ಮಾಡಲಿದ್ದೇವೆ. ನಾವೆಲ್ಲ ಶಾಸಕರು ಸೇರಿಕೊಂಡು ರಾಜ್ಯದಲ್ಲಿ ಒಳ್ಳೆಯ ಆಡಳಿತ ಮಾಡ್ತಿವಿ ಎಂದು ಹೇಳಿದ್ದಾರೆ. ರಮೇಶ ಜಾರಕಿಹೊಳಿಯವರಿಗೆ ಮಾಡುವುದಕ್ಕೆ ಯಾವುದೇ ಕೆಲಸವಿಲ್ಲ. ಅದಕ್ಕಾಗಿ ನಮ್ಮ ಪಕ್ಷದಲ್ಲಿ ಅತೃಪ್ತ ಶಾಸಕರಿದ್ದಾರೆ ಎನ್ನುತ್ತಿದ್ದಾರೆ ಎಂದು ಜಾರಕಿಹೊಳಿಗೆ ಟಾಂಗ್‌ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com