ಉದಯನಿಧಿ ಸನಾತನ ಧರ್ಮ ವಿವಾದ: ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪ

ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ'' ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ'' ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು.  ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆಂದು ಹೇಳಿದ್ದಾರೆ.

ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.

ನರೇಂದ್ರ ಮೋದಿ ಅವರು ಇನ್ನೂ ಆರ್.ಎಸ್.ಎಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ.

ಮೋದಿಯವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com