ಬಿಜೆಪಿ- ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಸಮಸ್ಯೆ ಬಗೆಹರಿಸುತ್ತೇವೆ- ಎಚ್ ಡಿ ಕುಮಾರಸ್ವಾಮಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಮಾತುಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಕುರಿತು ಭಾನುವಾರ ಸ್ಪಷ್ಪನೆ ನೀಡಿದ್ದಾರೆ. 
ಎಚ್. ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಮಾತುಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಕುರಿತು ಭಾನುವಾರ ಸ್ಪಷ್ಪನೆ ನೀಡಿದ್ದಾರೆ. 

ನಿನ್ನೆ ಲೋಕಸಭೆ ಚುನಾವಣೆಗೆ ಮೈತ್ರಿ ಬಗ್ಗೆ ಈ ಹಂತದಲ್ಲಿ ಏನನ್ನೂ ಹೇಳುವುದಿಲ್ಲ, ಇನ್ನೂ ಸಮಯವಿದೆ ಎಂದಿದ್ದ ಕುಮಾರಸ್ವಾಮಿ, ಇಂದು ಸೀಟು ಹಂಚಿಕೆ ವಿಚಾರ ಕುರಿತು ಮಾತನಾಡಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ಪ್ರಸ್ತುತ ರಾಜ್ಯ ಸರ್ಕಾರ ಹೇಗೆ ನಡೆಯುತ್ತಿದೆ ಎಂಬುದನ್ನು ಎಲ್ಲರೂ ನೋಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್  ಸೋಲಿಸುವುದೇ ನಮ್ಮ ಗುರಿ ಎಂದರು. 

ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್‌ನೊಂದಿಗೆ ಮೈತ್ರಿ ಕುರಿತು ನವದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಜೆಡಿಎಸ್ ವರಿಷ್ಠ  ಹೆಚ್. ಡಿ. ದೇವೇಗೌಡ ಅವರೊಂದಿಗೆ ಮಾತುಕತೆ ನಡೆದಿದೆ ಎನ್ನುವ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಬಹಿರಂಗ ಮಾಡಿದ್ದರು. ಅಲ್ಲದೇ, ಈ ಮೈತ್ರಿಯಿಂದ ರಾಜ್ಯದಲ್ಲಿ ಬಿಜೆಪಿ ಬಲಗೊಳ್ಳಲಿದೆ ಎಂದು ಅವರು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com