ಹಿಂದುತ್ವದ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ; ಬಿ.ಎಸ್ ಯಡಿಯೂರಪ್ಪ ಆಗ್ರಹ

ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ  ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು
ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು

ಬೆಂಗಳೂರು: ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ  ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರ್ಕಾರವು ಜನಪ್ರಿಯತೆ ಕಳೆದುಕೊಂಡಿದೆ.

ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರ್ಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಅಂತ ಸಭೆಯಲ್ಲಿ ಹೇಳಿದ್ದಾರೆ. ಸೆ.18ರಿಂದ ಕುರುಡುಮಲೆಯಿಂದ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಮಾಜಿ ಸಿಎಂ ಸದಾನಂದಗೌಡ, "ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ಜನವಿರೋಧಿಯಾದ ಇಂತಹ ಸರ್ಕಾರವನ್ನು ನಾನು ನೋಡಿಲ್ಲಎಂದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಬರಗಾಲ, ಆಡಳಿತದಲ್ಲಿ ವೈಫಲ್ಯ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಅಸಮರ್ಪಕ ಆಡಳಿತ ವೈಖರಿ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಕೇವಲ 100 ದಿನಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಇದು ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ. ಈ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಸರ್ಕಾರವು ಎಸ್‌ಸಿ/ಎಸ್‌ಟಿ ಸಮುದಾಯಗಳ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ಅವರಿಗೆ ಅನ್ಯಾಯ ಮಾಡಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com