ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚೆಯಾಗಿಲ್ಲ: ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು: ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ದೆಹಲಿಯಲ್ಲಿ ಪಕ್ಷದ ವರಿಷ್ಠರ ಜೊತೆ ರಾಜ್ಯ ರಾಜಕೀಯ ವಿಚಾರದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಮನಸ್ಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿಲ್ಲ. ಆದರೆ ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇರುವುದಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಇದೇ ವೇಳೆ ಕಾವೇರಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಬಿಜೆಪಿ ನಾಯಕ, ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೂಡ ಬಿಡಬಾರದು. ರಾಜ್ಯ ಸರ್ಕಾರ ನೀರು ಬಿಟ್ಟು ಅಕ್ಷಮ್ಯ ಅಪರಾಧ ಮಾಡಿದೆ. ಕೂಡಲೇ ಸರ್ಕಾರ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ