ಕಾವೇರಿ ವಿವಾದ: ನಾಳೆ ದೆಹಲಿಯಲ್ಲಿ ರಾಜ್ಯದ ಸಂಸದರು, ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸೇರಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಮತ್ತು...
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸೇರಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಮತ್ತು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಮತ್ತು ಕೇಂದ್ರದ ಅನುಮತಿಗಾಗಿ ಕಾಯುತ್ತಿರುವ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಗೆ ತಮ್ಮ ಕಚೇರಿಗಳನ್ನು ಬಳಸಿಕೊಳ್ಳುವಂತೆ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರನ್ನು ಒತ್ತಾಯಿಸುವ ಸಾಧ್ಯತೆಯಿದೆ.

ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಸೋಮವಾರ ಆದೇಶಿಸಿದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಇಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳ ಪ್ರವಾಸದ ಪ್ರಕಾರ, ಸಿದ್ದರಾಮಯ್ಯ ಅವರು ಇಂದು ರಾತ್ರಿ ದೆಹಲಿಗೆ ತೆರಳಲಿದ್ದು, ಬುಧವಾರ ಕೇಂದ್ರ ಸಚಿವರು ಸೇರಿದಂತೆ ಕರ್ನಾಟಕದ ಎಲ್ಲ ಸಂಸದರೊಂದಿಗೆ ಉಪಹಾರ ಸಭೆ ನಡೆಸಲಿದ್ದಾರೆ.

ನಂತರ ಅವರು ಹಲವಾರು ಇತರ ಕೇಂದ್ರ ಸಚಿವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ ಮತ್ತು ಅವರ ಹಿಂದಿರುಗುವ ಪ್ರಯಾಣವನ್ನು "ಮುಕ್ತ"ವಾಗಿ ಇರಿಸಲಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಕಾವೇರಿ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಮುನ್ನ, ನಾಳೆ ದೆಹಲಿಯಲ್ಲಿ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಯಲಿದೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೂಡ ದೆಹಲಿಗೆ ತೆರಳಲಿದ್ದು, ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರ ಜೊತೆಗಿನ ಸಭೆಗಳಲ್ಲಿ ಸಿಎಂ ಜೊತೆ ಭಾಗವಹಿಸುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com