ಕುತೂಹಲ ಕೆರಳಿಸಿದ ಮಾಜಿ ಪ್ರಧಾನಿ ದೇವೇಗೌಡ ಸುದ್ದಿಗೋಷ್ಠಿ: ದೆಹಲಿಯಲ್ಲಿ ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತ ಘೋಷಣೆ?

ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸುದ್ದಿ ಬೆನ್ನಲ್ಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಇಂದು ಶುಕ್ರವಾರ ದೆಹಲಿಯಲ್ಲಿ ಬೆಳಗ್ಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಕೆರಳಿಸಿದೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ನವದೆಹಲಿ/ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸುದ್ದಿ ಬೆನ್ನಲ್ಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಇಂದು ಶುಕ್ರವಾರ ದೆಹಲಿಯಲ್ಲಿ ಬೆಳಗ್ಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಕೆರಳಿಸಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮೈತ್ರಿ ಕುರಿತು ಮತ್ತು ಎಷ್ಟು ಸೀಟುಗಳಲ್ಲಿ ಮೈತ್ರಿ ಮಾಡಿಕೊಳ್ಳಲಿವೆ ಎಂಬುದನ್ನು ದೇವೇಗೌಡರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 

ನಿನ್ನೆ ದೆಹಲಿಗೆ ಕುಮಾರಸ್ವಾಮಿ ಮತ್ತು ಹೆಚ್ ಡಿ ರೇವಣ್ಣ ಹಾಗೂ ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ದೆಹಲಿಗೆ ಆಗಮಿಸಿದ್ದು ರಹಸ್ಯ ಸಭೆಗಳನ್ನು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ದೇವೇಗೌಡರ ನಿವಾಸಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಆಗಮಿಸಿ ಭೇಟಿ ನೀಡಿದ್ದು ಕೂಡ ಹಲವು ಕುತೂಹಲಕ್ಕೆ ಕಾರಣವಾಗಿದೆ. 

ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಹೋದರ ರೇವಣ್ಣ, ಪ್ರಜ್ವಲ್ ರೇವಣ್ಣ, ನಿಖಿಲ್, ಸಾ.ರಾ.ಮಹೇಶ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮಾಜಿ ಸಿಎಂ ಕುಮಾರಸ್ವಾಮಿ ದೋಸ್ತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ. ನಿನ್ನೆ ಮೈತ್ರಿ ಸಂಬಂಧ ದೆಹಲಿಯ ಸಫ್ದರ್​ಜಂಗ್ ಲೇನ್​ನಲ್ಲಿರುವ ದೇವೇಗೌಡರ ನಿವಾಸಲ್ಲಿ ಮಹತ್ವದ ಸಭೆ ನಡೆದಿದೆ. 

ಕರ್ನಾಟಕದಲ್ಲಿ 6 ಲೋಕಸಭಾ ಕ್ಷೇತ್ರಗಳ ಮೇಲಿ ಕಣ್ಣಿಟ್ಟಿರುವ ಜೆಡಿಎಸ್ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಲೇ ಬೇಕು ಎಂದು ಬಿಜೆಪಿ ಮುಂದೆ ಬೇಡಿಕೆ ಮುಂದಿಟ್ಟಿದೆ ಎನ್ನಲಾಗಿದೆ. ಮಂಡ್ಯ, ಹಾಸನ, ಕೋಲಾರ, ತುಮಕೂರು ಸೀಟ್​ಗಾಗಿ ಜೆಡಿಎಸ್ ಬೇಡಿಕೆ ಇಟ್ಟಿದ್ದು, ಈ ಪೈಕಿ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಇನ್ನೂ ಅಂತಿಮವಾಗಿಲ್ಲ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com