ಕಾವೇರಿ ವಿವಾದ: ಕೇಂದ್ರ ಸರ್ಕಾರದಿಂದ ಅಸಾಧ್ಯ, ಸೋನಿಯಾ ಗಾಂಧಿಯೇ ಸಮಸ್ಯೆ ಬಗೆಹರಿಸಲಿ; ಬಿಜೆಪಿ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬಿಜೆಪಿ ನಾಯಕರು ಶನಿವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿವಾದ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬಿಜೆಪಿ ನಾಯಕರು ಶನಿವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿವಾದ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು, ಕೆಆರ್‌ಎಸ್‌ನಲ್ಲಿ  20 ಟಿಎಂಸಿ ನೀರು ಇದೆ. ಕುಡಿಯುವ ನೀರಿಗೆ ಏನು ಮಾಡ್ತಾರೆ ಇವರು. ಕಾವೇರಿ ವಿಚಾರದಲ್ಲಿ ಸೋನಿಯಾ ಗಾಂಧಿ ಮಧ್ಯೆ ಪ್ರವೇಶ ಮಾಡಲಿ. ತಮಿಳುನಾಡಿನಲ್ಲಿರೋ ಇಂಡಿಯಾ ಅಲಯನ್ಸ್ ಇದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸೋನಿಯಾ ಮಾತು ಕೇಳುತ್ತಾರೆಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅಲ್ಲಿನ ಚುನಾವಣೆ ವೇಳೆ ಡಿಎಂಕೆ ಪರ ಪ್ರಚಾರ ಮಾಡಿದ್ದರು. ಶಿವಕುಮಾರ್ ತಮಿಳುನಾಡಿಗೆ ಭೇಟಿ ನೀಡಿ ಅಲ್ಲಿನ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಬದಲು ಹೇಳಿಕೆ ನೀಡುವುದರಲ್ಲಿ ನಿರತರಾಗಿದ್ದಾರೆ ಎಂದು ಕಿಡಿಕಾರಿದರು.

ವಿಧಾನಸಭಾ ಚುನಾವಣೆಗೂ ಮುನ್ನ ಮತಕ್ಕಾಗಿ ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ಈಗ ನಮ್ಮ ರೈತರನ್ನು ನಿರಾಸೆಗೊಳಿಸಿದೆ. ತಮಿಳುನಾಡಿಗೆ ನೀರು ಬಿಟ್ಟ ನಂತರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.

ಕೆಪಿಸಿಸಿ ಅಧ್ಯಕ್ಷರು ಬಿಸಿಯಾಗಿದ್ದಾರೆ. ಸೆಟ್ಲುಮೆಂಟ್ ರಾಜಕಾರಣದಲ್ಲಿ ಬಿಸಿ ಇದ್ದಾರೆ, ಕಾವೇರಿ ಮತ್ತು ಕಾಸಿನ ನಡುವೆ ಕಾಸಿಗೆ ಈ ಸರ್ಕಾರ ಮಹತ್ವ ಕೊಡುತ್ತಿದೆ. ಕರ್ನಾಟಕ ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿ ಒಕ್ಕೂಟ ಇದೆ. ಸೂಟ್‌ಕೇಸ್‌ ಸಮೇತಾ ಎಂಕೆ ಸ್ಟಾಲಿನ್ ಬಂದಿದ್ದರು. ಈಗ ಕಾವೇರಿ ವಿಚಾರದಲ್ಲಿ ಸೋನಿಯಾ ಗಾಂಧಿ ಮಧ್ಯ ಪ್ರವೇಶ ಮಾಡಬೇಕು. ಅಧಿಕಾರಕ್ಕೆ ಪಾದಯಾತ್ರೆ ಮಾಡಿ ರೈತರಿಗೆ ಚಿಪ್ಪು ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಂಬಿ ವೋಟ್ ಹಾಕಿದವರಿಗೆ ಈಗ ಅನ್ಯಾಯವಾಗಿದೆ, ಕುಡಿಯುವ ನೀರಿಲ್ಲ ಎಂದು ಹೇಳಿ. ನೀರು ಬಿಟ್ಟು ತಮಿಳುನಾಡಿಗೆ ಸರ್ವಪಕ್ಷ ಸಭೆ ಕರೆಯುತ್ತೀರಿ. ಹಾಗಿದ್ದಿರಿ ಯಾವ ಉದ್ದೇಶಕ್ಕೆ ಪಾದಯಾತ್ರೆ ಮಾಡಿದ್ದಿರಿ  ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com