ಒಂದು ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮೇ 13 ರಂದು ವಿಜಯೋತ್ಸವ ನಮ್ಮದೆ: ನಳಿನ್ ಕುಮಾರ್ ಕಟೀಲ್
ಬಳ್ಳಾರಿ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ವಾರದೊಳಗೆ ಬಿಡುಗಡೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಶುಕ್ರವಾರ ನಡೆದ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಕಟೀಲ್, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಒಂದು ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದರು.
ನಮ್ಮ ಪ್ರೋಗ್ರೆಸ್ ಕಾರ್ಡ್ ಆಧಾರದಲ್ಲಿ ಮತ ಯಾಚಿಸುತ್ತಿದ್ದೇವೆ , ಬಿಜೆಪಿ ಸರ್ಕಾರದ ಎಲ್ಲಾ ಕೆಲಸಗಳನ್ನು ಕರ್ನಾಟಕದ ಜನತೆ ನೋಡಿದ್ದಾರೆ, ಮೇ 13 ಚುನಾವಣಾ ಫಲಿತಾಂಶ ಪ್ರಕಟವಾದಾಗ ವಿಜಯೋತ್ಸವ ಆಚರಿಸುವುದು ನಾವೇ ಎಂದು ವಿಶ್ವಾಸ ವ್ಯಕ್ತ ಪಡಿಸಿದರು
ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯಿಸಿದ ನಳೀನ್ ಕುಮಾರ್ ಕಟೀಲ್ ಅವರು, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಸಲುವಾಗಿ ಮಾತುಕತೆ ಮಾಡಲಾಗಿತ್ತು. ಪಕ್ಷ ಬಿಡುವ ಬಗ್ಗೆ ಅವರು ಯಾವುದೇ ಕಾರಣಗಳನ್ನೂ ಸಹ ಕೊಟ್ಟಿಲ್ಲ.
ಚುನಾವಣೆ ಬಂದಾಗ ಒಂದು ಪಕ್ಷದಿಂದು ಇನ್ನೊಂದು ಪಕ್ಷಕ್ಕೆ ಹೋಗುವುದು ಸಾಮಾನ್ಯ. ಶಾಸಕ ಗೋಪಾಲಕೃಷ್ಣ ಹೊರತುಪಡಿಸಿ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ತಿಳಿಸಿದರು. ಚುನಾವಣೆಯಲ್ಲಿ ಯಾರು ಸರಿ ಮತ್ತು ತಪ್ಪು ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ