ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಚ್ಚರಿಯ ಪ್ಯಾಕೇಜ್, ಹೊಸ ಮುಖಗಳಿಗೆ ಮಣೆ: ಸಿಎಂ ಬೊಮ್ಮಾಯಿ
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Published: 04th April 2023 02:14 PM | Last Updated: 04th April 2023 05:52 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಚುನಾವಣಾ ಸಮಿತಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈ ಬಾರಿ ಪಟ್ಟಿಯಲ್ಲಿ ಹಲವು ಅಚ್ಚರಿಯ ಪ್ಯಾಕೇಜ್‌ಗಳು ಇರಲಿವೆ. ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಚ್ಚರಿ ಮೂಡಲಿದೆ. ಹಲವು ಕಡೆ ಹೊಸ ಪ್ರಯೋಗ ಮಾಡಲಾಗುವುದು. ಹಲವು ರಾಜ್ಯಗಳಲ್ಲಿ ಇದು ಯಶಸ್ವಿಯಾಗಿದೆ. ಅಚ್ಚರಿ ಮೂಡಿಸುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದರು.
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎರಡು ದಿನಗಳ ಜಿಲ್ಲಾ ಸಮಿತಿಗಳ ಸಭೆ ಮುಗಿದಿದೆ. ಇಂದು ಮತ್ತು ನಾಳೆ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಮಿತಿಗೆ ಕಳುಹಿಸಲಾಗುವುದು, ಏಪ್ರಿಲ್ 8 ರಂದು ಕೇಂದ್ರ ಸಮಿತಿಯಿಂದ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.
ಇದನ್ನೂ ಓದಿ: ಕೇಸರಿ ಪಾಳಯದ ಭದ್ರಕೋಟೆ ಕರಾವಳಿ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಕ್ಲೀನ್ ಸ್ವೀಪ್? ಕಮಾಲ್ ಮಾಡಲಿದ್ಯಾ ಕಾಂಗ್ರೆಸ್!
"ಪ್ರಜಾಸತ್ತಾತ್ಮಕ ರೀತಿಯಲ್ಲಿ ಟಿಕೆಟ್‌ಗಳನ್ನು ವಿತರಿಸಲಾಗುವುದು, ತಳಮಟ್ಟದಿಂದ ವರದಿಗಳನ್ನು ಪಡೆದ ನಂತರ ಮತ್ತು ವಾಸ್ತವತೆಯ ಆಧಾರದ ಮೇಲೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.
ಕಳೆದೆರೆಡು ದಿನಗಳಿಂದ ಜಿಲ್ಲಾ ಸಮಿತಿಗಳಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಇಂದು ರಾಜ್ಯ ಕೋರ್ ಕಮಿಟಿ ಪರಿಶೀಲಿಸಿ, ಕೇಂದ್ರಕ್ಕೆ ಕಳುಹಿಸಿಕೊಡಲಿದೆ. ಬಹುತೇಕ ಎಪ್ರಿಲ್ 8 ಅಥವಾ 9 ರಂದು ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ.
— Basavaraj S Bommai (@BSBommai) April 4, 2023
1/2 pic.twitter.com/Zmyk5aPdRB
ಮೂಲಗಳ ಪ್ರಕಾರ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಏಪ್ರಿಲ್ 7 ರಂದು ದೆಹಲಿಗೆ ಹೋಗಲಿದ್ದಾರೆ.