ನಕಲಿ ವಿಡಿಯೋ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬಿಜೆಪಿಯನ್ನು ಕೆಟ್ಟದಾಗಿ ಬಿಂಬಿಸಲು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಮತ್ತು ಕಪೋಲಕಲ್ಪಿತ ವಿಡಿಯೋವನ್ನು ಹಾಕಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತಾರೂಢ ಬಿಜೆಪಿ ಮಂಗಳವಾರ ಆಗ್ರಹಿಸಿದೆ.
ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿರುವುದು.
ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿರುವುದು.

ಬೆಂಗಳೂರು: ಬಿಜೆಪಿಯನ್ನು ಕೆಟ್ಟದಾಗಿ ಬಿಂಬಿಸಲು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಮತ್ತು ಕಪೋಲಕಲ್ಪಿತ ವಿಡಿಯೋವನ್ನು ಹಾಕಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತಾರೂಢ ಬಿಜೆಪಿ ಮಂಗಳವಾರ ಆಗ್ರಹಿಸಿದೆ.

ನಕಲಿ ವಿಡಿಯೋಗಳು ಮತದಾರರ ಮೇಲೆ ಪ್ರಭಾವ ಬೀರುತ್ತದೆ ಎಂದಿರುವ ರಾಜ್ಯ ಬಿಜೆಪಿ ಮಂಗಳವಾರ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ದೂರು ಸಲ್ಲಿಸಿತು.

"ಏಪ್ರಿಲ್ 1 ರಂದು, ಶಿವಕುಮಾರ್ ಅವರು ಸುಳ್ಳು ಮತ್ತು ಕಪೋಲಕಲ್ಪಿತ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ ಒಬ್ಬ ವ್ಯಕ್ತಿಯು Google ಹುಡುಕಾಟದಲ್ಲಿ "ನಾನೊಬ್ಬ ನಿರುದ್ಯೋಗಿ, ನನ್ನ ಬಗ್ಗೆ ಕಾಳಜಿ ವಹಿಸುತ್ತಾರೆ??? ಎಂದು ಪ್ರಶೆಯೊಂದನ್ನು ಹಾಕಿ ಹುಡುಕಾಟ ನಡೆಸಿದ್ದು, ಈ ಹುಡುಕಾಟದಲ್ಲಿ ಕಾಂಗ್ರೆಸ್ ನಾವು ಮಾಡುತ್ತೇವೆ! ನಾವು ಮಾಡುತ್ತೇವೆಂಬ ಹಾಗೂ ಬಿಜೆಪಿ: ಕ್ಷಮಿಸಿ ಮಾಹಿತಿಯಿಲ್ಲ, ಸಿಸ್ಟಮ್ ವೈಫಲ್ಯ ಎಂಬ ಫಲಿತಾಂಶ ಬಂದಿರುವ 14 ಸೆಕೆಂಡ್ ಗಳಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಈ ವಿಡಿಯೋಗೆ ರಾಜ್ಯ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಅಲ್ಲದೆ, ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com