ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸುದ್ದಿ; ನಟ ಪ್ರಕಾಶ್ ರಾಜ್ ಟಾಂಗ್ ಕೊಟ್ಟು ಹೇಳಿದ್ದೇನು?

ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಕಾಶ್ ರಾಜ್
ಪ್ರಕಾಶ್ ರಾಜ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಈಗಾಗಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಸುದೀಪ್ ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಕಮಲ ಪಕ್ಷ ಸೇರಲಿದ್ದಾರೆ ಎನ್ನುವ ವಿಚಾರ ವರದಿಯಾಗುತ್ತಿದೆ.

ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇಂದು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ಇದು ಹತಾಶ ಬಿಜೆಪಿಯಿಂದ ಹರಡಿದ ಸುಳ್ಳು ಸುದ್ದಿ ಎಂದು ನಾನು ಬಲವಾಗಿ ನಂಬುತ್ತೇನೆ. ಕಿಚ್ಚ ಸುದೀಪ್ ಹೆಚ್ಚು ಸಂವೇದನಾಶೀಲ ನಾಗರಿಕರಾಗಿದ್ದು, ಇದಕ್ಕೆ ಬಲಿಯಾಗುವುದಿಲ್ಲ ಎಂದೇ ನಾನು ಭಾವಿಸುತ್ತೇನೆ. ಕರ್ನಾಟಕದಲ್ಲಿ ಸೋಲುವ ಭಯದಿಂದ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಇದಾಗಿರಲಿ. ನಮ್ಮ ಕಿಚ್ಚ ತಮ್ಮನ್ನು ತಾವು ಮಾರಿಕೊಳ್ಳುವವರಲ್ಲ' ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಇಂದು (ಏಪ್ರಿಲ್ 5) ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸುದ್ದಿಸಂಸ್ಥೆ ಎಎನ್ಐ ವರದಿ ಪ್ರಕಾರ, ಕಿಚ್ಚ ಸುದೀಪ್  ಇಂದು ಮಧ್ಯಾಹ್ನ 1.30ರಿಂದ 2.30ರ ನಡುವೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಬಾವುಟ ಹಿಡಿಯಲಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಕಿಚ್ಚ ಸುದೀಪ್ ಬಿಜೆಪಿಗೆ ಸೇರುತ್ತಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಈ ಎಲ್ಲಾ ವದಂತಿಗಳ ನಡುವೆ ಸುದೀಪ್ ಅವರು ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನಲಾಗಿದ್ದು, ಈ ವೇಳೆ ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ, ತಮ್ಮ ರಾಜಕೀಯ ನಿಲುವು ಪ್ರಕಟಿಸಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com