ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಹತಾಶೆ- ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಪಕ್ಷ ಹತಾಶೆಗೊಂಡಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಅರುಣ್ ಸಿಂಗ್
ಅರುಣ್ ಸಿಂಗ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಪಕ್ಷ ಹತಾಶೆಗೊಂಡಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಸಾಮೂಹಿಕ ವಲಸೆ ಪರಿಸ್ಥಿತಿ ಎದುರಿಸುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲ ಹೇಳಿಕೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವ ಹತಾಶ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಅರುಣ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಹತಾಶೆ ಹೊರತಾಗಿ, ನಿರಂತರವಾಗಿ ಹೆಚ್ಚಾಗುತ್ತಿರುವ ಬಿಜೆಪಿ ವರ್ಚಸ್ಸಿನ ಎದುರು ಕಾಂಗ್ರೆಸ್ ಪತನದ ಹಾದಿಯನ್ನು ಸ್ಪಷ್ಟವಾಗಿ ನೋಡುತ್ತಿರುವುದರಿಂದ ಕಾಂಗ್ರೆಸ್ ಇಂತಹ ಆರೋಪ ಮಾಡುತ್ತಿದೆ.  ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿ ಕರ್ನಾಟಕದಲ್ಲಿನ ಎಲ್ಲಾ ವರ್ಗದ ಜನರು, ರೈತರು, ಮಹಿಳೆಯರ ಅಭಿವೃದ್ಧಿಯಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದರು. 

ಬಿಜೆಪಿ ಪ್ರಜಾಸತಾತ್ಮಕ ಪಕ್ಷವಾಗಿದ್ದು, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಂಪ್ರದಾಯವನ್ನು ಅನುಸರಿಸಲಾಗುತ್ತದೆ. ಮೊದಲಿಗೆ ರಾಜ್ಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡುತ್ತದೆ. ನಂತರ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತದೆ. ಇದು ಬಿಜೆಪಿಯಲ್ಲಿ ಯಾವಾಗಲೂ ನಡೆದುಕೊಂಡು ಬಂದಿದೆ ಎಂದು ಅರುಣ್ ಸಿಂಗ್ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com