ರಾಜಕೀಯ

ಕರ್ನಾಟಕ ಚುನಾವಣೆ: ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏಪ್ರಿಲ್ 9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕರ್ನಾಟಕ ಚುನಾವಣೆ: ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ
ಬಿಜೆಪಿ ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏಪ್ರಿಲ್ 9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ, ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಲ್. ಸಂತೋಷ್ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. 

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂವರ ಹೆಸರಿರುವ ಪಟ್ಟಿಯನ್ನು ರಾಜ್ಯ ಬಿಜೆಪಿ  ಕಳುಹಿಸಿದ್ದು, ಈ ಪಟ್ಟಿ ಕುರಿತು ಕೇಂದ್ರ ಚುನಾವಣಾ ಸಮಿತಿ ಪರಿಶೀಲನೆ ನಡೆಸಲಿದೆ. ಬಳಿಕ  ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಏಪ್ರಿಲ್  4 ರಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಮನ್ಸುಖ್ ಮಾಂಡವೀಯಾ, ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಅಣ್ಣಾಮಲೈ, ಮಾಜಿ ಉಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ  ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಕಿರುಪಟ್ಟಿ ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.