ಚುನಾವಣೆ ಹೊತ್ತಲ್ಲಿ ಪಕ್ಷಾಂತರ ಪರ್ವ; ಕಾಂಗ್ರೆಸ್ ನಿಂದ 15 ಜನ ಜೆಡಿಎಸ್ ಗೆ: ಹೆಚ್ ಡಿ ಕುಮಾರಸ್ವಾಮಿ
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಬಿರುಸಾಗಿ ನಡೆಯುತ್ತಿದೆ. ಮೂರು ಪ್ರಮುಖ ರಾಜಕೀಯ ಪಕ್ಷಗಳಲ್ಲಿಯೂ ಇದು ಕಂಡುಬರುತ್ತಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತ ಮುಖಂಡರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.
Published: 08th April 2023 05:02 PM | Last Updated: 08th April 2023 06:13 PM | A+A A-

ಹೆಚ್ ಡಿ ಕುಮಾರಸ್ವಾಮಿ
ರಾಮನಗರ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಬಿರುಸಾಗಿ ನಡೆಯುತ್ತಿದೆ. ಮೂರು ಪ್ರಮುಖ ರಾಜಕೀಯ ಪಕ್ಷಗಳಲ್ಲಿಯೂ ಇದು ಕಂಡುಬರುತ್ತಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತ ಮುಖಂಡರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.
ಕೇತಗಾನಹಳ್ಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮಾಜಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಈಗಾಗಲೇ ಮಾತುಕತೆ ನಡೆಸಿದ್ದು, ಜೆಡಿಎಸ್ ಸೇರುವುದಾಗಿ ಅವರೇ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ 15 ಜನರು ಜೆಡಿಸ್ ಗೆ ಬರ್ತಾರೆ ಎಂದರು.
ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಚುನಾವಣೆ: ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ, ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ
ಈ ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಮುಳುಗಿಸಲು ಶಾಸಕರನ್ನ ಕರೆದುಕೊಂಡು ಹೋದರು. ಇದೀಗ ಕಾಂಗ್ರೆಸ್ನಿಂದಲೇ ಜೆಡಿಎಸ್ಗೆ ಬರುತ್ತಿದ್ದಾರೆ. ಸೋಮವಾರ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಇವರು ಇದೇ ವೇಳೆ ತಿಳಿಸಿದರು.