ವಿಧಾನಸಭೆ ಚುನಾವಣೆ: ಚುನಾವಣಾ ರಾಜಕೀಯದಿಂದ ನಿವೃತ್ತಿ, ಮಕ್ಕಳ ವೃತ್ತಿಜೀವನದತ್ತ ಬಿಜೆಪಿ ಹಿರಿಯ ನಾಯಕರ ಚಿತ್ತ!
ವಂಶ ರಾಜಕಾರಣಕ್ಕೆ ತಿರುವು ನೀಡುವಂತೆ, ರಾಜ್ಯದ ಕರ್ನಾಟಕದ ಕೆಲವು ಹಿರಿಯ ಬಿಜೆಪಿ ನಾಯಕರು ಮುಖ್ಯವಾಹಿನಿಯ ರಾಜಕೀಯದಲ್ಲಿ ತಮ್ಮ ಮಕ್ಕಳ ವೃತ್ತಿಜೀವನವನ್ನು ನಿರ್ಮಿಸುವ ಪ್ರಯತ್ನದಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪುತ್ರರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದಾರೆ.
Published: 08th April 2023 08:19 AM | Last Updated: 08th April 2023 02:49 PM | A+A A-

ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ವಂಶ ರಾಜಕಾರಣಕ್ಕೆ ತಿರುವು ನೀಡುವಂತೆ, ರಾಜ್ಯದ ಕರ್ನಾಟಕದ ಕೆಲವು ಹಿರಿಯ ಬಿಜೆಪಿ ನಾಯಕರು ಮುಖ್ಯವಾಹಿನಿಯ ರಾಜಕೀಯದಲ್ಲಿ ತಮ್ಮ ಮಕ್ಕಳ ವೃತ್ತಿಜೀವನವನ್ನು ನಿರ್ಮಿಸುವ ಪ್ರಯತ್ನದಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪುತ್ರರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದು, ಅವರ ಪುತ್ರ ಬಿವೈ ವಿಜಯೇಂದ್ರ ಅವರು ತಾವು ಇಷ್ಟು ವರ್ಷ ಪ್ರತಿನಿಧಿಸುತ್ತಿದ್ದ ಶಿವಮೊಗ್ಗದ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸುವುದರೊಂದಿಗೆ ಇದು ಪ್ರಾರಂಭವಾಯಿತು. ಕಳೆದ ವಾರ ಕುಂದಾಪುರದಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ದಾವಣಗೆರೆಯಿಂದ ರವೀಂದ್ರನಾಥ್ ಹಾಗೂ ಸಚಿವ ಎಂಟಿಬಿ ನಾಗರಾಜ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿದ್ದರು.
ಶುಕ್ರವಾರ ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದ ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಮಗ ನಿತೇಶ್ ಪುರುಷೋತ್ತಮ್‌ಗೆ ಹೊಸಕೋಟೆಗೆ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರಲ್ಲಿ ಮನವಿ ಮಾಡುತ್ತೇನೆ ಎಂದರು. ನಿತೇಶ್ ಮಾಜಿ ಬಿಬಿಎಂಪಿ ಕೌನ್ಸಿಲರ್ ಆಗಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಎಂಟಿಬಿ, 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಶರತ್ ಬಚ್ಚೇಗೌಡ ವಿರುದ್ಧ ಸೋತಿದ್ದರು.
ಇದನ್ನೂ ಓದಿ: ಕೆ.ಎಸ್. ಈಶ್ವರಪ್ಪಗೆ ಬಿಜೆಪಿ ಟಿಕೆಟ್ ದೌಟು! ಪುತ್ರನ ಪರ ಲಾಬಿ
ಪ್ರತಿ ಕುಟುಂಬಕ್ಕೆ ಒಂದು ಟಿಕೆಟ್ ನೀಡುವ ಯಾವುದೇ ನಿಯಮ ಪಕ್ಷದಲ್ಲಿ ಇಲ್ಲವಾದರೂ, ಕೆಲವು ಅನುಭವಿಗಳು ವಿವಿಧ ಕಾರಣಗಳಿಗಾಗಿ ಸ್ವಯಂ ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. 'ನಮ್ಮ ಪಕ್ಷಕ್ಕೆ ಗೆಲ್ಲುವ ಅಭ್ಯರ್ಥಿಗಳು ಕೂಡ ಮುಖ್ಯ. ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ನಂತರ, ಅವರನ್ನು ಅನುಸರಿಸಿ ಕಿರಿಯರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ನಾವು ವರಿಷ್ಠರಲ್ಲಿ ಮನವಿ ಮಾತ್ರ ಮಾಡಬಹುದು. ಕೆಲವು ನಾಯಕರು ತಮ್ಮ ಸ್ಥಾನವನ್ನು ತಮ್ಮ ಮಕ್ಕಳು ತೆಗೆದುಕೊಳ್ಳಬೇಕೆಂದು ಬಯಸುವುದು ಸಹಜ, ಆದರೆ, ಅದು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು' ಎಂದು ಹೆಸರು ಹೇಳಲಿಚ್ಛಿಸದ ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದರು.
ಮೂಲಗಳ ಪ್ರಕಾರ, ನಾಲ್ಕೈದು ಅವಧಿಗೆ ಅಧಿಕಾರ ನಡೆಸಿರುವ ಹಲವು ಹಿರಿಯ ಶಾಸಕರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.