ಕಾಂಗ್ರೆಸ್​ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ವೈಎಸ್ ವಿ ದತ್ತಾ; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಪಕ್ಷದ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ಕಡೂರು ಮಾಜಿ ಶಾಸಕ ವೈಎಸ್‌ವಿ ದತ್ತಾ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಭಾನುವಾರ ಘೋಷಿಸಿದ್ದಾರೆ.
ವೈಎಸ್ ವಿ ದತ್ತಾ
ವೈಎಸ್ ವಿ ದತ್ತಾ

ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಪಕ್ಷದ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ಕಡೂರು ಮಾಜಿ ಶಾಸಕ ವೈಎಸ್‌ವಿ ದತ್ತಾ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಭಾನುವಾರ ಘೋಷಿಸಿದ್ದಾರೆ.

ಇತ್ತೀಚಿಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ದತ್ತಾ ಅವರಿಗೆ ಟಿಕೆಟ್​ ಕೈತಪ್ಪಿದ್ದರಿಂದ ಇಂದು ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿ, ತಮ್ಮ ಅಭಿಮಾನಿಗಳ ಜೊತೆ ಚರ್ಚಿಸಿದರು.

ಅಭಿಮಾನಿಗಳ ಅಭಿಪ್ರಾಯದಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದು, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ವೈಎಸ್ ವಿ ದತ್ತಾ ಅವರು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್​ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ.

ಇಂದು ಕಡೂರಿನ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ಚುನಾವಣಾ ಸ್ಪರ್ಧೆ ಬಗ್ಗೆ ಅಭಿಮಾನಿಗಳ ಸಮ್ಮುಖದಲ್ಲಿ ಕಡೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಚುನಾವಣಾ ಖರ್ಚಿಗೆ ಹಣ ಸಂಗ್ರಹಕ್ಕೆ ಮುಂದಾಗಿದ್ದು, ಸಮಾವೇಶದಲ್ಲೇ ಟವಲ್ ಹಾಸಿ ಹಣ ಸಂಗ್ರಹಿಸಿದರು.

ಈ ವೇಳೆ ಮಾತನಾಡಿದ ದತ್ತಾ, ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದು ಮುಗಿದ ಕಥೆ. ಹಣ ಮತ್ತು ಜಾತಿ ಮೇಲೆ ಅಭ್ಯರ್ಥಿ ಅಯ್ಕೆ ಮಾಡುತ್ತಾರೆ. ಜಾತಿ ಬಲವಿಲ್ಲ, ಮೈ ತುಂಬಾ ಸಾಲ ಮಾಡಿದವನು ನಾನು. ನನಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ರೆ ಕಡೂರು ಬಿಜೆಪಿ ಕಚೇರಿ ಮುಂದೆ ಪಟಾಕಿ ಹೊಡೆದರು. ಇದರ ಇಂದಿನ ಅರ್ಥ ಕ್ಷೇತ್ರದ ಜನತೆಗೆ ಅರ್ಥವಾಗಿದೆ ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com