ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ: ಟಿಕೆಟ್‌ ಬೇಡ ಎಂದು JP ನಡ್ಡಾಗೆ ಪತ್ರ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ
ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಹೌದು.. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ. 

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com