ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಮಾಡಿದ ಜಗದೀಶ್ ಶೆಟ್ಟರ್

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಣಕ್ಕಿಳಿಸದಿರುವ ಪಕ್ಷದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬುಧವಾರ...
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ನವದೆಹಲಿ: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಣಕ್ಕಿಳಿಸದಿರುವ ಪಕ್ಷದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬುಧವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ಟಿಕೆಟ್ ಕೈತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರು ಇಂದು ದಿಢೀರ್ ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಜೆಪಿ ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ನಡ್ಡಾ ಭೇಟಿ ಬಳಿಕ ಮಾತನಾಡಿದ ಶೆಟ್ಟರ್, ಜೆಪಿ ನಡ್ಡಾ ಅವರೊಂದಿಗೆ ನನ್ನ ಭಾವನೆ ಹಂಚಿಕೊಂಡಿದ್ದೇನೆ. ಅವರು ಎಲ್ಲವನ್ನೂ ಆಲಿಸಿದ್ದಾರೆ. ಕಳೆದ ಚುನವಾಣೆಯಲ್ಲಿ ಸ್ಪರ್ಧಿಸಿದ್ದು, ಈ ಬಾರಿಯೂ ಚುನಾವಣೆಗೆ ಸ್ಪರ್ಧಿಸಬೇಕು ಎಂಬುದು ನನ್ನ ಆಶಯ ಎಂದಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನ ಹಾಲಿ ಶಾಸಕರಾಗಿರುವ ಶೆಟ್ಟರ್ ಅವರಿಗೆ ನಿನ್ನೆ ಕರೆ ಮಾಡಿದ್ದ ಬಿಜೆಪಿ ವರಿಷ್ಠರು, ಚುನಾವಣೆಗೆ ನೀವು ಸ್ಪರ್ಧಿಸಬೇಡಿ. ಬೇರೆಯವರಿಗೆ ಅವಕಾಶ ನೀಡುವಂತೆ ಸಲಹೆ ನೀಡಿದ್ದರು. ಇದಕ್ಕೆ ಒಪ್ಪದ ಶೆಟ್ಟರ್ ಅವರು, ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು.

ಮಂಗಳವಾರ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶೆಟ್ಟರ್ ಅವರಿಗೆ ಟಿಕೆಟ್ ಘೋಷಿಸಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com