2018ರಲ್ಲಿ ಕಾಂಗ್ರೆಸ್ ದಲಿತರನ್ನೇಕೆ ಸಿಎಂ ಮಾಡಲಿಲ್ಲ: ಹೆಚ್'ಡಿ.ಕುಮಾರಸ್ವಾಮಿ ಪ್ರಶ್ನೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ದಲಿತರ ಕಾರ್ಡ್ ಬಳಕೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಾಗ್ದಾಳಿ ನಡೆಸುತ್ತಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ದಲಿತರ ಕಾರ್ಡ್ ಬಳಕೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಾಗ್ದಾಳಿ ನಡೆಸುತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ ಇದೀಗ ದಲಿತರನ್ನು ಬಳಕೆ ಮಾಡಿಕೊಳ್ಳಲು ಮುಂದಾಗಿದೆ. ದಲಿತರ ಬಗ್ಗೆ ಕಾಳಜಿರುವ ಕಾಂಗ್ರೆಸ್, 2018ರಲ್ಲskz ಮಲ್ಲಿಕಾರ್ಜುನ ಖರ್ಗೆ ಅವರನ್ನು ಜೆಡಿಎಸ್ ಬಹಿರಂಗವಾಗಿ ಬೆಂಬಲಿಸಿದಾಗ ಸಿಎಂ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೋಟ್, ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ, ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈ ಕುರಿತು ಸಲಹೆ ನೀಡಿದ್ದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಿಎಂ ಸ್ಥಾನಕ್ಕೆ ಖರ್ಗೆ ಅವರ ಹೆಸರು ಕೇಳಿ ಬಂದಿತ್ತು. 2013ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಾಗಲೂ ಕಾಂಗ್ರೆಸ್ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬಹುದಿತ್ತು. ಆದರೆ, ಮಾಡಲಿಲ್ಲ ಎಂದು ಕಿಡಿಕಾರಿದರು.

ಇದೇ ವೇಳೆ ಹಾಸನದಿಂದ ಜೆಡಿಎಸ್ ಅಭ್ಯರ್ಥಿ ವಿಚಾರ ಕುರಿತು ಮಾತನಾಡಿ, ಈ ಬಗ್ಗೆ ಕೆಲ ಗೊಂದಲ ಉಂಟಾಗಿದ್ದು, ಈ ಕ್ಷೇತ್ರದಿಂದ ಪಕ್ಷದ ಕಾರ್ಯಕರ್ತರೊಬ್ಬರನ್ನು ಕಣಕ್ಕಿಳಿಸಲಾಗುವುದು ಎಂದು ಪುನರುಚ್ಚರಿಸಿದ್ದರು.

ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಮಂಗಳವಾರ ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ ಅವರು, ಪಕ್ಷದ ಪಂಚರತ್ನ ಯಾತ್ರೆ ಕೈಗೊಂಡರು. ಈ ವೇಳೆ ಸಿದ್ದಾರೂಢ ಮಠ, ಫತೇ ಷಾ ವಾಲಿ ದರ್ಗಾ, ಮತ್ತು ತುಳಜಾ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ಗಣೇಶ ಪೇಟೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಿದ ಬಳಿಕ, ಯಾತ್ರೆಯನ್ನು ಮುಕ್ತಾಯಗೊಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com