ಕಡೂರು ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ನಾಮಪತ್ರ ಸಲ್ಲಿಕೆ; ಸಿಟಿ ರವಿ ಸಾಥ್

ಚುನಾವಣಾ ಆಯೋಗ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ಸಿಟಿ ರವಿ - ಬೆಳ್ಳಿ ಪ್ರಕಾಶ್
ಸಿಟಿ ರವಿ - ಬೆಳ್ಳಿ ಪ್ರಕಾಶ್

ಚಿಕ್ಕಮಗಳೂರು: ಚುನಾವಣಾ ಆಯೋಗ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ಅವರು ಮೊದಲ ದಿನವೇ ತಮ್ಮ ಉಮೇದುವಾರಿಗೆ ಸಲ್ಲಿಸಿದ್ದಾರೆ.

ಬೆಳ್ಳಿ ಪ್ರಕಾಶ್ ಅವರು ತಮ್ಮ ಪತ್ನಿ ಕವಿತಾ, ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಜೊತೆ ತೆರಳಿ ಕಡೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯದ ವಿವಿಧ ಪಕ್ಷಗಳ ರಾಜಕೀಯ ನಾಯಕರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನಾಳೆ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ. ಅಭ್ಯರ್ಥಿಗಳು ಶುಭ ದಿನ, ಶುಭ ಗಳಿಗೆ ನೋಡಿಕೊಂಡು ನಾಮಪತ್ರ ಸಲ್ಲಿಸುತ್ತಿದ್ದಾರೆ. 

ಆನ್ ಲೈನ್ ನಲ್ಲಿ ಸಲ್ಲಿಸಲು ಅವಕಾಶ: ಇದೇ ಮೊದಲ ಬಾರಿಗೆ ಅಭ್ಯರ್ಥಿಗಳಿಗೆ ಆನ್ ಲೈನ್​ ಮೂಲಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಚುನಾವಣೆ ಆಯೋಗದ ವೆಬ್​ಸೈಟ್​ನಲ್ಲಿ ಎಲ್ಲಾ ದಾಖಲೆಗಳೊಂದಿಗೆ ಉಮೇದುವಾರಿಕೆ ಸಲ್ಲಿಸಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com