ಕಾಂಗ್ರೆಸ್ ಗೆ 141 ಸ್ಥಾನ ಖಚಿತ; ಪದ್ಮನಾಭನಗರದಲ್ಲಿ ಆರ್.ಅಶೋಕ್ ವಿರುದ್ಧ ಸುರೇಶ್ ಸ್ಪರ್ಧಿಸಲ್ಲ: ಡಿಕೆ ಶಿವಕುಮಾರ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ, ಬಿಜೆಪಿ ಕೇವಲ 65-70 ಸ್ಥಾನ ಗಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ, ಬಿಜೆಪಿ ಕೇವಲ 65-70 ಸ್ಥಾನ ಗಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು 166 ಅಭ್ಯರ್ಥಿಗಳ ಕಾಂಗ್ರೆಸ್ ಮೊದಲ ಪಟ್ಟಿಯೊಂದಿಗೆ ಹೋಲಿಸಿದ ಶಿವಕುಮಾರ್, ಶೀಘ್ರದಲ್ಲೇ ಸಾವಿರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂದು ಹೇಳಿದರು.

'ಅತೃಪ್ತ' ಬಿಜೆಪಿ ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಬಿಜೆಪಿಯ ಹಲವಾರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವ ಕಾರಣ ಸದ್ಯ ಯಾರೊಂದಿಗೂ ಮಾತನಾಡಲು ಹೋಗುವುದಿಲ್ಲ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಕಂದಾಯ ಸಚಿವ ಆರ್.ಅಶೋಕ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷವು ಈಗಾಗಲೇ ರಘುನಾಥ್ ನಾಯ್ಡು ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿದೆ, ಆದರೆ ಸುರೇಶ್ ಪದ್ಮನಾಭನಗರದಿಂದ ಸ್ಪರ್ಧಿಸಬೇಕೆಂದು ಒತ್ತಡವಿದೆ ಎಂದು ಶಿವಕುಮಾರ್ ಹೇಳಿದರು.

ಅವರು ಯಾರೊಂದಿಗೂ  ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು. ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಾಯ್ಡು ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ನಾವು ಒಕ್ಕಲಿಗರನ್ನು ಕಣಕ್ಕಿಳಿಸಿದ್ದೆವು  ಆದರೆ ನಮ್ಮ ತಂತ್ರ ಫಲಿಸಲಿಲ್ಲ ಎಂದು ಶಿವಕುಮಾರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com