ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ಮತ್ತಷ್ಟು ಏರತೊಡಗಿದೆ.
Published: 13th April 2023 04:47 PM | Last Updated: 13th April 2023 04:56 PM | A+A A-

ಮುರುಗೇಶ್ ನಿರಾಣಿ, ಡಾ.ಕೆ. ಸುಧಾಕರ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ತಾರಕ್ಕೇರುತ್ತಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮರು ಆಯ್ಕೆ ಬಯಸಿ ತಮ್ಮ ತವರು ಕ್ಷೇತ್ರ ಬೀಳಗಿಯಲ್ಲಿ ಸಾಂಕೇತಿಕವಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಾಗಲಕೋಟೆ ಲೋಕಸಭಾ ಸದಸ್ಯರಾದ ಪಿ.ಸಿ.ಗದ್ದಿಗೌಡರ್, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ ಸೇರಿದಂತೆ ಅನೇಕ ಪಕ್ಷದ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇಂದು ಬೀಳಗಿಯ ಶ್ರೀ ಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದೆನು. ಬಳಿಕ ಬೀಳಗಿ ಮಿನಿವಿಧಾನಸೌಧದ ಆವರಣದಲ್ಲಿರುವ ಶ್ರೀ ಗಣಪತಿ ದೇವರ ಆಶೀರ್ವಾದ ಪಡೆದು, ಅಪಾರ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಬೀಳಗಿ ಮತಕ್ಷೇತ್ರದಿಂದ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಯಿತು. pic.twitter.com/zR0cNDHJdI
— Dr. Murugesh R Nirani (@NiraniMurugesh) April 13, 2023
ತಾಲ್ಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ತಹಸೀಲ್ದಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಇದೇ 19ರಂದು ನಿರಾಣಿ ಅವರು ಮತ್ತೊಮ್ಮೆ ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಪ್ರಮುಖರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದ ಅಭ್ಯರ್ಥಿಗಳ ನಾಮಪತ್ರಿಕೆ ಸಲ್ಲಿಕೆ ಆರಂಭ, ಆನ್ ಲೈನ್ ನಲ್ಲಿ ಸಲ್ಲಿಸಲು ಅವಕಾಶ
ಮತ್ತೊಂದೆಡೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕುಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಗೆ ಸಲ್ಲಿಸಿದ್ದಾರೆ.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾನು ಇಂದು ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದೆ.
— Dr Sudhakar K (@mla_sudhakar) April 13, 2023
ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ.@BJP4Karnataka
1/3 pic.twitter.com/njC5ZnvjDz
ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಾ. ಕೆ. ಸುಧಾಕರ್ ನಾಲ್ಕನೇ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿಸುವ ಸಂಕಲ್ಪ ಹೊಂದಿರುವುದಾಗಿ ತಿಳಿಸಿದ್ದಾರೆ.